ಜಿಲ್ಲೆ

ಕನ್ನಡ ನಾಡು-ನುಡಿ ರಕ್ಷಣೆಗೆ ಶ್ರಮಿಸಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಕನ್ನಡದ ನಾಡು ನುಡಿ ರಕ್ಷಣೆಗಾಗಿ ಪ್ರತಿಯೊಬ್ಬ ಕನ್ನಡಿಗ ಶ್ರಮಿಸಬೇಕು ಎಂದು ಅಖಿಲ ಭಾರತ ಶಿಕ್ಷರರ ಫೆಡರೇಷನ್​ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಅಭಿಪ್ರಾಯಪಟ್ಟರು.

ನಗರದ ಸೃಜನಾ ರಂಗ ಮಂದಿರದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್​ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ನುಡಿ ಸಂಭ್ರಮ, ರಾಜ್ಯಮಟ್ಟದ ಕವಿಪೀಠ ಮಹಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯಂತ ಪ್ರಾಚಿನ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯ ಸೊಗಡು, ಹಿರಿಮೆಯನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬ ಕನ್ನಡಿಗನ ಹೃದಯದಲ್ಲಿ ಕನ್ನಡವು ಹಾಸುಹೊಕ್ಕಾಗಿದೆ. ಅತೀ ಹೆಚ್ಚು ಜ್ಞಾನ ಪೀಠ ಪ್ರಶಸ್ತಿ ಪಡೆದಿರುವರು ನಮ್ಮ ಭಾಷೆ ಎನ್ನುವದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್​.ಎಫ್​. ಸಿದ್ದನಗೌಡರ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಫ್​ ಚುಳಕಿ, ಇತರರು ಇದ್ದರು.