ಜಿಲ್ಲೆ

ಆರೋಗ್ಯ ಕಾರ್ಯಕ್ರಮಗಳ ಮಾಹಿತಿ ಕಾರ್ಯಾಗಾರ

ಸುನಿಲ್ ಪೊನ್ನೇಟಿ

ಮಡಿಕೇರಿ:

ಸಿಬ್ಬಂದಿ ಕೊರತೆ ಮಧ್ಯೆಯೂ ಜಿಲ್ಲೆಯಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಹೇಳಿದರು. ಮಾಧ್ಯಮದವರಿಗಾಗಿ ಡಿಹೆಚ್‌ಒ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಆರೋಗ್ಯ ಕಾರ್ಯಕ್ರಮಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತಾಯಿ ಮತ್ತು ಮಕ್ಕಳ ಆರೋಗ್ಯ ಕ್ಷೇತ್ರ ಸೇರಿದಂತೆ 48ಕ್ಕೂ ಹೆಚ್ಚು ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಇಲಾಖೆಯಲ್ಲಿ ಇರುವ ಸಿಬ್ಬಂದಿ ಕೊರತೆ, ಕಡಿಮೆ ಸಂಖ್ಯೆಯ ಆಶಾ ಕಾರ್ಯಕರ್ತರ ಸಮಸ್ಯೆ ಮಧ್ಯೆಯೂ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ರಾಜ್ಯ ಮತ್ತು ರಾಷ್ಟಿçÃಯ ಮಾನದಂಡಕ್ಕೆ ಹತ್ತಿರವಾಗಿ ಕೊಡಗಿನ ಸಾಧನೆ ಇದೆ. 2025ಕ್ಕೆ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಮಾಡುವ ನಿಟ್ಟಿನಲ್ಲಿ ದಾಪುಗಾಲು ಇಡಲಾಗುತ್ತಿದೆ. ರಕ್ತದೊತ್ತಡ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ಕಂಡು ಹಿಡಿಯುವುದು ಮತ್ತು ಔಷಧಿಗಳನ್ನು ಕೊಡುವಲ್ಲಿ ಪರಿಣಾಮಕಾರಿ ಕೆಲಸ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಜನವರಿಯಿಂದ ನವೆಂಬರ್ ಅಂತ್ಯದವರೆಗೆ ನಾಯಿ ಕಡಿತ 4015 ಪ್ರಕರಣಗಳು, ಹಾವು ಕಡಿತ 307 ಪ್ರಕರಣಗಳು, ಭೇದಿ 2292 ಪ್ರಕರಣಗಳು, ಟೈಫಾಯಿಡ್ 846 ಪ್ರಕರಗಣಗಳು, ಡೆಂಘೀ 274 ಪ್ರಕರಣಗಳು, ಕಾಲರಾ 3 ಪ್ರಕರಣ, ಮಲೇರಿಯಾ 3, ಇಲಿಜ್ವರ 13 ಪ್ರಕರಣಗಳು ವರದಿಯಾಗಿದ್ದು, ಯಾವುದೇ ರೀತಿಯ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ನವೆಂಬರ್ ಅಂತ್ಯದ ವರೆಗೆ ತಾಯಿ ಮರಣ ಸಂಭವಿಸಿಲ್ಲ. ಆದರೆ ಡಿಸೆಂಬರ್ ತಿಂಗಳಲ್ಲಿ ಒಬ್ಬ ತಾಯಿ ಮರಣ ಹೊಂದಿದ್ದಾರೆ. ಹೆಣ್ಣು ಭ್ರೂಣ ಹತ್ಯೆಯೂ ಜಿಲ್ಲೆಯಲ್ಲಿ ವರದಿ ಆಗಿಲ್ಲ. ಮಕ್ಕಳಿಗೆ ಸಂಬAಧಿಸಿದ ಎಲ್ಲಾ ಲಸಿಕೆಗಳೂ ಉಚಿತವಾಗಿ ಲಭ್ಯ ಇದೆ ಎಂದು ಮಾಹಿತಿ ನೀಡಿದರು.

ಕೋವಿಡ್ ಸಂದರ್ಭ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬAಧಿಸಿದAತೆ ಹೆಚ್ಚಿನ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸಿ ಹೆಚ್ಚಿನ ಅರಿವು ಮೂಡಿಸುವಲ್ಲಿ ಸಹಕರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸರ್ಕಾರದ ಆಶಯದಂತೆ ‘ಎಲ್ಲೆಡೆ ಆರೋಗ್ಯ, ಎಲ್ಲರಿಗೂ ಆರೋಗ್ಯ’ ಎಂಬAತೆ, ಆರೋಗ್ಯ ಸೇವೆ ಕಲ್ಪಿಸುವಲ್ಲಿ ಶ್ರಮಿಸಲಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾತನಾಡಿ, ಕಲಿಯುವುದು ನಿರಂತರ ಪ್ರಕ್ರಿಯೆ. ಮಾಧ್ಯಮದವರು ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಇಂಥ ಕಾರ್ಯಾಗಾರಗಳಿಂದ ವಿವಿಧ ಕ್ಷೇತ್ರಗಳಿಗೆ ಸಂಬAಧಿಸಿದ ಜ್ಞಾನ ವೃದ್ಧಿಸಿಕೊಳ್ಳಲು ಸಹಾಯವಾಗುತ್ತದೆ. ಆರೋಗ್ಯದ ಯಾವುದೇ ವಿಷಯದಲ್ಲಿ ಭಯ ಇಟ್ಟುಕೊಳ್ಳಬಾರದು. ಈ ಬಗ್ಗೆ ಕಾಳಜಿ ತೋರಿಸಬೇಕು ಎಂದರು.

ನಂತರ ನಡೆದ ಕಾರ್ಯಾಗಾರದಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಆನಂದ್, ಕುಟುಂಬ ಕಲ್ಯಾಣ ಕಾರ್ಯಕ್ರಮ ಎಂದರೆ ಕೇವಲ ಜನನ ನಿಯಂತ್ರಣ ಮಾತ್ರವಲ್ಲ. ಇದು ನಿಜಾರ್ಥದಲ್ಲಿ ಕಲ್ಯಾಣ ಕಾರ್ಯಕ್ರಮ. ಕುಟುಂಬ ಯೋಜನೆ ಕಾರ್ಯಕ್ರಮಗಳನ್ನು ಮಹಿಳೆಯರೇ ಹೆಚ್ಚು ಮಾಡಿಸಿಕೊಳ್ಳುತ್ತಿದ್ದಾರೆ. ಪುರುಷರು ಆಸಕ್ತಿ ತೋರಿಸುತ್ತಿಲ್ಲ. ಇದಕ್ಕೆ ಪುರುಷ ಪ್ರಧಾನ ಸಮಾಜದಲ್ಲಿ ಪುರುಷರ ಬಗೆಗಿನ ಭಾವನೆಗಳು ಮತ್ತು ಮಹಿಳೆಯರ ಧೋರಣೆಯೂ ಕಾರಣ ಆಗಿದೆ. ಪುರುಷರ ಕುಟುಂಬ ಯೋಜನೆ ವಿಷಯದಲ್ಲಿ ದಂಪತಿ ನಿರ್ಧಾರ ಪ್ರಮುಖವಾಗಿರುತ್ತದೆ. ಸ್ಕಾö್ಯನಿಂಗ್ ಸೆಂಟರ್ ಆರಂಭಿಸುವವರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಪ್ರಸವಪೂರ್ವ ಲಿಂಗ ಪತ್ತೆ ಹಚ್ಚಿದರೆ ಕಠಿಣ ಶಿಕ್ಷೆ ಆಗುತ್ತದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಆದ ನಂತರವಷ್ಟೇ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು.

ಶ್ರವಣದೋಷ ನಿವಾರಣಾ ಕಾರ್ಯಕ್ರಮದಲ್ಲಿ ಶ್ರವಣ ಉಪಕರಣ ನೀಡಲಾಗುತ್ತದೆ. ಕ್ಷಯರೋಗ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಉಚಿತ ಔಷಧಿ ನೀಡಲಾಗುತ್ತದೆ. ಎಚ್‌ಐವಿ ಬಗ್ಗೆ ಆಪ್ತ ಸಮಾಲೋಚನೆ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ 11 ಐಸಿಟಿಸಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ ಮಾತನಾಡಿ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ, ಅಪೌಷ್ಟಿಕ ಮಕ್ಕಳ ಪಾಲನಾ ಕೇಂದ್ರ, ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಯೋಜನೆ, ನ್ಯೂಮೋನೀಯಾ ತಡೆಗಟ್ಟುವಿಕೆ, ಸಾಮಾಜಿಕ ಜಾಗೃತಿ ಮೂಡಿಸುವುದು, ಶುಚಿ ಕಾರ್ಯಕ್ರಮ, ವೈಪ್ಸ್, ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮ, ರಾಷ್ಟಿçÃಯ ಕಿಶೋರಿ ಸ್ವಾಸ್ಥö್ಯ ಕಾರ್ಯಕ್ರಮ(ಸ್ನೇಹ ಕ್ಲಿನಿಕ್), ರಾಷ್ಟಿçÃಯ ಅತಿಸಾರ ಭೇದಿ ನಿಯಂತ್ರಣ, ರಾಷ್ಟಿçÃಯ ಜಂತುಹುಳು ನಿವಾರಣೆ ಹೀಗೆ ಹಲವು ಕಾರ್ಯಕ್ರಮಗಳು ಇವೆ ಎಂದರು.

ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿ ಡಾ. ಶ್ರೀನಿವಾಸ್ ಮಾತನಾಡಿ ಎನ್‌ಪಿಎನ್‌ಸಿಡಿ, ಸಮಗ್ರ ರೋಗಗಳ ಕಣ್ಗಾವಲು ಯೋಜನೆ, ರಾಷ್ಟಿçÃಯ ಕೀಟ ಜನ್ಯ ರೋಗಗಳ ನಿಯಂತ್ರಣ, ರಾಷ್ಟಿçÃಯ ಅಯೋಡಿನ್ ಕೊರತೆ ರೋಗಗಳ ನಿಯಂತ್ರಣ, ರೇಬಿಸ್ ನಿಯಂತ್ರಣ, ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ರಾಷ್ಟಿçÃಯ ಕಾರ್ಯಕ್ರಮ, ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಎನ್‌ಪಿಎನ್‌ಸಿಡಿ ಕಾರ್ಯಕ್ರಮ, ಎನ್‌ಪಿಪಿಸಿ ಕಾರ್ಯಕ್ರಮ, ಎನ್‌ಪಿಎಚ್‌ಸಿಇ ಕಾರ್ಯಕ್ರಮ, ರಾಷ್ಟಿçÃಯ ತಂಬಾಕು ನಿಯಂತ್ರಣ ಹೀಗೆ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಕಾರ್ಯಕ್ರಮದ ಉದ್ದೇಶ ಕುರಿತು ಮಾಹಿತಿ ನೀಡಿದರು. ದೇವರಾಜು, ಮಾಹಿತಿ ಶಿಕ್ಷಣ ವಿಭಾಗದ ಪಾಲಾಕ್ಷ, ಮಂಜುಳ, ಜ್ಯೋತಿ, ಸುನಿತಾ ಇತರರು ಇದ್ದರು.