ಆಲೂರು: ತಾಲೂಕಿನ ಹೆಮ್ಮಿಗೆ ಗ್ರಾಮದ ಕಾಫಿ ತೋಟದಲ್ಲಿ ಮಂಗಳವಾರ ಮರಗಸಿ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲೂಕಿನ ಪಾಳ್ಯ ಹೋಬಳಿ ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬಡಿಗೆಕೊಪ್ಪಲು ಗ್ರಾಮದ ನಿವಾಸಿ ಶಾಂತರಾಜು (42) ಮೃತ. ಹೆಮ್ಮಿಗೆ ಗ್ರಾಮದ ಹರೀಶ್ ಅವರ ಕಾಫಿ ತೋಟದಲ್ಲಿ ಮಂಗಳವಾರ ಮರಗಸಿ ಮಾಡುತ್ತಿದ್ದರು. ಮಳೆಯ ಸಂದರ್ಭದಲ್ಲಿಯೂ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಲೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.