ಸೋಮವಾರಪೇಟೆ: ಕೊವರ್‌ಕೊಲ್ಲಿ ಎಸ್ಟೇಟ್‌ನಲ್ಲಿ ಮಂಗಳವಾರ ಕಾಡಾನೆ ದಾಳಿಯಿಂದ ಕಾರ್ಮಿಕ ಗಾಯಗೊಂಡಿದ್ದಾನೆ.
ಕಾರ್ಮಿಕ ಕೆ.ಬಿ.ಕುಮಾರ್ ಗಾಯಗೊಂಡವರು. ಕಾಫಿ ತೋಟದಲ್ಲಿ 15 ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಒಂಟಿಸಲಗ ಹಠಾತ್ ದಾಳಿ ನಡೆಸಿದೆ. ಸೊಂಡಲಿನಿಂದ ತಳ್ಳಿದ ಸಂದರ್ಭ ಬಿದ್ದ ಪರಿಣಾಮ ಸೊಂಟ, ಕಾಲಿಗೆ ಪೆಟ್ಟಾಗಿದೆ. ಗಾಯಾಳು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಡಾನೆ ಹಾವಳಿಯಿಂದ ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರತಿದಿನ ಕಾರ್ಮಿಕರು ಜೀವಭಯದಿಂದ ಕೆಲಸ ಮಾಡಬೇಕು. ಅರಣ್ಯ ಇಲಾಖೆ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಮುಖಂಡ ಎಚ್.ಎಂ.ಸೋಮಪ್ಪ ಎಚ್ಚರಿಸಿದ್ದಾರೆ. ಆರ್‌ಎಫ್‌ಒ ಚೇತನ್ ಗಾಯಾಳುವನ್ನು ಭೇಟಿ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.