ವಿಟ್ಲ: ಪೌರಕಾರ್ಮಿಕರು ಸ್ವಚ್ಛತೆಯಲ್ಲಿ ಮಹತ್ತರ ಪಾತ್ರ ವಹಿಸಿರುವುದರಿಂದ ಆರೋಗ್ಯಯುತ ಸಮಾಜದಲ್ಲಿ ಬಾಳಲು ನಮಗೆ ಸಹಕಾರಿಯಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಹೇಳಿದರು.
ವಿಟ್ಲ ಪಿ.ಎಂ.ಶ್ರೀ ಸರ್ಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೌರಕಾರ್ಮಿಕರಾದ ಹನುಮವ್ವ ಕಾರ್ಯಕ್ರಮ ಉದ್ಘಾಟಿಸಿದರು. ಸರ್ಕಾರಿ ಆಸ್ಪತ್ರೆ ವೈದ್ಯ ಶಮನ್ ಜೆ.ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಪಟ್ಟಣ ಪಂಚಾಯಿತಿಯ ಎಲ್ಲ ಪೌರಕಾರ್ಮಿಕರಿಗೆ ಸನ್ಮಾನಿಸಲಾಯಿತು. ಪೌರಕಾರ್ಮಿಕ ಶಿವಪ್ಪ ಅನಿಸಿಕೆ ವ್ಯಕ್ತಪಡಿಸಿದರು. ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೌರಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಲಾಯಿತು. ಪಟ್ಟಣ ಪಂಚಾಯಿತಿಯ ವತಿಯಿಂದ ಸುರಕ್ಷಾ ಪರಿಕರಗಳನ್ನು ನೀಡಲಾಯಿತು.
ಉಪಾಧ್ಯಕ್ಷೆ ಸಂಗೀತ ಪಾಣೆಮಜಲು, ಮುಖ್ಯಶಿಕ್ಷಕಿ ಶ್ರೀಮತಿ ಉಪಸ್ಥಿತರಿದ್ದರು. ಚಂದ್ರಶೇಖರ ವರ್ಮ ಸ್ವಾಗತಿಸಿದರು. ಮುಖ್ಯಾಽಕಾರಿ ಕರುಣಾಕರ ವಿ. ಪ್ರಸ್ತಾವನೆಗೈದರು. ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್ ವಂದಿಸಿದರು. ಪೌರಕಾರ್ಮಿಕ ಪೂವಪ್ಪ ಕಾರ್ಯಕ್ರಮ ನಿರೂಪಿಸಿದರು. ಲ್ಯಾನ್ಸಿ ಬ್ರಿಯಾನ್ ಸಹಕರಿಸಿದರು.