ಗಿರಿಯಪ್ಪ ಪೂಜಾರಿ 
ಜಿಲ್ಲೆ

ಕಾರ್ಮಿಕರ ಸಂಘಟನೆಗಳ ಮುಷ್ಕರ 9ರಂದು

ನರೇಶ್ ಕುಮಾರ್

ದೇವದುರ್ಗ: ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜು.9ರಂದು ಪಟ್ಟಣದಲ್ಲಿ ಕಾರ್ಮಿಕರ ಸಂಘಟನೆಗಳ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ತಾಲೂಕು ಅಧ್ಯಕ್ಷ ಗಿರಿಯಪ್ಪ ಪೂಜಾರಿ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಮಿಕರ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾರಣ ದುಡಿಯುವ ವರ್ಗ ತೀವ್ರ ಸಮಸ್ಯೆ ಎದುರಿಸುತ್ತಿದೆ. ಹೀಗಾಗಿ ಜು.9ರಂದು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಅಂಗನವಾಡಿ, ಬಿಸಿಯೂಟ, ಗ್ರಾಪಂ, ಆಶಾ ಕಾರ್ಯಕರ್ತೆಯರಿಗೆ 31 ಸಾವಿರ ರೂ. ವೇತನ ನೀಡಬೇಕು. ವಿದ್ಯುತ್ ಖಾಸಗೀಕರಣ ಬಿಲ್ ವಾಪಸ್ ಪಡೆಯಬೇಕು.

ಕಟ್ಟಡ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ನರೇಗಾ ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಿ 600ರೂ. ಕೂಲಿ ನೀಡಬೇಕು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗ್ರಹಿಸಲಾಗುವುದು. ಅಂದು ಬೆಳಗ್ಗೆ ಎಪಿಎಂಸಿ ಮೈದಾನದಿಂದ ತಾಲೂಕು ಆಡಳಿತ ಸೌಧದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.