ನಾಗರಮುನ್ನೋಳಿ: ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ
ಕಾರ್ಯಕರ್ತರು ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಸಮೀಪದ ಕರೋಶಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಯಬಾಗ ಬಿಜೆಪಿ ಮಂಡಲ ಸಭೆಯಲ್ಲಿ ಮಾತನಾಡಿದ, ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 9ವರ್ಷಗಳಿಂದ ದೇಶದಲ್ಲಿ ಮಾಡಿರುವ ಅಭಿವದ್ಧಿ ಕಾರ್ಯಗಳನ್ನು ಜನರ ಮನೆ ಮನೆಗೆ ಮುಟ್ಟಿಸುವ ಕೆಲಸ ಕಾರ್ಯಕರ್ತರು ಮಾಡಬೇಕು. ಆರ್ಥಿಕತೆಯಲ್ಲಿ ಭಾರತ ವಿಶ್ವದಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯಲು ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಅಕಾರ ನೀಡಬೇಕು ಎಂದರು.
ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ರಾಜೇಶ ನೇರ್ಲಿ ಮಾತನಾಡಿ, ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅಕಾರ ಪಡೆಯಲು ಕಾರ್ಯಕರ್ತರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದರು.
ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೋನವಾಡೆ, ರಮೇಶ ಕಾಳನ್ನವರ, ಸತೀಶ ಅಪ್ಪಾಜಿಗೋಳ, ರಾಜು ಹರಗನ್ನವರ, ವಿಜಯಕುಮಾರ ಕೋಠಿವಾಲೆ, ಮನೋಜ ಮನಗೂಳಿ, ಬಸವರಾಜ ಮಾಳಗೆ, ಹಸನ ಸನದಿ, ಅಣ್ಣಾಸಾಹೇಬ ಖೇಮಲಾಪುರೆ, ರವಿ ಹಿರೇಕೋಡಿ, ಸದಾಶಿವ ಘೋರ್ಪಡೆ ಇತರರಿದ್ದರು.