ಜಿಲ್ಲೆ

ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ : ವಿಕಾಸ್ ಪುತ್ತೂರು ಮಾಹಿತಿ

ಸೌಮ್ಯ ಆರ್

ಬಂಟ್ವಾಳ: ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ನಿಗದಿಪಡಿಸಲಾಗಿರುವ ಸದಸ್ಯತ್ವ ಮತ್ತು ಸಕ್ರಿಯ ಸದಸ್ಯತ್ವದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಂಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ವಿಕಾಸ್ ಪುತ್ತೂರು ಹೇಳಿದರು.

ಸೋಮವಾರ ಬಿ.ಸಿ.ರೋಡಿನಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಸಂಟನಾ ಪರ್ವದ ಕಾರ್ಯಾಗಾರದಲ್ಲಿ ವಾತನಾಡಿದರು.

ಬಂಟ್ವಾಳ ಕ್ಷೇತ್ರದಲ್ಲಿ 50 ಸಾವಿರ ಸದಸ್ಯತ್ವ ಹಾಗೂ 750 ಸಕ್ರಿಯ ಸದಸ್ಯತ್ವದ ಗುರಿಯನ್ನು ನೀಡಲಾಗಿದ್ದು, ಸದಸ್ಯತ್ವದ ಆರಂಭಿಕ ಹಂತದಲ್ಲಿ ಜಿಲ್ಲೆಯಲ್ಲೇ ಅಗ್ರಸ್ಥಾನದಲ್ಲಿದ್ದ ಬಂಟ್ವಾಳ ಕ್ಷೇತ್ರ ಈಗ ಮೂರನೇ ಸ್ಥಾನದಲ್ಲಿದೆ. ಕಾರ್ಯಕರ್ತರು ಕೊಂಚ ಪರಿಶ್ರಮಪಟ್ಟರೆ ನಿಗದಿಪಡಿಸಲಾದ ಗುರಿಯನ್ನು ಸಾಧಿಸಿದರೆ ಮತ್ತೆ ಮೊದಲ ಸ್ಥಾನ ಪಡೆಯುವುದು ನಿಶ್ಚಿತ ಎಂದರು.

ಸಂಟನಾ ಪರ್ವದ ಜಿಲ್ಲಾ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಮಾತನಾಡಿದರು. ಬಂಟ್ವಾಳ ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಕಾರ್ಯಾಗಾರವನ್ನು ಉದ್ಘಾಟಿಸಿದರು. ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಕ್ಷೇತ್ರದ ಸಹಯೋಗಿಗಳ ಪಟ್ಟಿಯನ್ನು ಘೋಷಿಸಲಾಯಿತು.

ಸಂಟನಾ ಪರ್ವದ ಬಂಟ್ವಾಳ ಮಂಡಲದ ಸಹಯೋಗಿ ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷ, ಕಾರ್ಯದರ್ಶಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು, ಶಕ್ತಿಕೇಂದ್ರದ ಸಹಯೋಗಿಗಳು, ಪ್ರಮುಖರು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಪತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಮಂಡಲ ಮಾ ಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ ವಂದಿಸಿದರು.