ಜಿಲ್ಲೆ

ಲೇಡಿಗೋಷನ್‌ನಲ್ಲಿ ಕಾನೂನು ಅರಿವು ಕಾರ್ಯಾಗಾರ

reportermng

ಮಂಗಳೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಲೇಡಿಗೋಶನ್ ಆಸ್ಪತ್ರೆ ಮತ್ತು ಸಖಿ ಒನ್‌ಸ್ಟಾಪ್ ಸೆಂಟರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂತ್ರಸ್ತ ಪರಿಹಾರ ಯೋಜನೆ ಕುರಿತು ಕಾನೂನು ಅರಿವು ಕಾರ್ಯಾಗಾರ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಜರುಗಿತು.
ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಾಗಾರ ಉದ್ಘಾಟಿಸಿ, ಪ್ರತಿಯೊಬ್ಬ ಮಹಿಳೆ ತನಗೆ ಭಾರತದ ಸಂವಿಧಾನ ಕಲ್ಪಿಸಿಕೊಟ್ಟ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವನ್ನು ಮೂಡಿಸಿಕೊಂಡು ಸಬಲತೆಯತ್ತ ಪಯಣಿಸುತ್ತಾ ಜೀವನ್ಮುಖಿಗಳಾಗಬೇಕು ಎಂದರು.
ಹಿರಿಯ ವಕೀಲೆ ಗೌರಿ, ಸಂತ್ರಸ್ತ ಮಹಿಳೆಯರಿಗೆ ಸರ್ಕಾರದಿಂದ ದೊರೆಯುವ ಪರಿಹಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಲೇಡಿಗೋಶನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಎಂ.ಆರ್. ಅಧ್ಯಕ್ಷತೆ ವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪ ಬೋವಿ, ನಿವಾಸಿ ವೈದ್ಯಾಧಿಕಾರಿ ಡಾ.ಬಾಲಕೃಷ್ಣ ರಾವ್, ಶುಶ್ರೂಷಾಧೀಕ್ಷಕಿ ತ್ರೇಸಿಯಮ್ಮ, ಅನಸೂಯ ಉಪಸ್ಥಿತರಿದ್ದರು.
ರಕ್ಷಿತಾ ಸ್ವಾಗತಿಸಿ, ಡಯಾನಾ ಫರ್ನಾಂಡಿಸ್ ವಂದಿಸಿದರು. ಸಖಿ ಒನ್‌ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಿಯಾ ಕೆ.ಸಿ. ಕಾರ್ಯಕ್ರಮ ನಿರೂಪಿಸಿದರು.