ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸ್ಟಾಫ್ ಡೆವಲಪ್ಮೆಂಟ್ ಸೆಂಟರ್ ಮತ್ತು ಐಕ್ಯೂಎಸಿಗಳ ಸಹಯೋಗದೊಂದಿಗೆ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ಬೋಧಕ ಸಿಬ್ಬಂದಿಗಳಿಗೆ ಎರಡು ದಿನಗಳ ಪರಿಣಾಮಕಾರಿ ಕಲಿಕಾ ವಿಧಾನಗಳ ಕುರಿತು ಇತ್ತೀಚೆಗೆ ಕಾರ್ಯಗಾರ ಆಯೋಜಿಸಲಾಯಿತು.
ಪ್ರಾಂಶುಪಾಲೆ ಡಾ.ವೀಣಾ ಕುಮಾರಿ ಬಿ.ಕೆ. ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ.ಗ್ರೇನಲ್ ಡಿ ಮೆಲ್ಲೋ, ಪ್ರಜ್ವಲ್ ಹೆಗ್ಡೆ, ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಗಾರದಲ್ಲಿ ಅಧ್ಯಾಪಕರಿಗೆ ಇ-ಕಲಿಕಾ ಸಾಮಗ್ರಿಗಳ ತಯಾರಿ, ಮೌಲ್ಯಮಾಪನ, ಬೋಧನಾ ವಿಧಾನದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗಳ ಕುರಿತು ತರಬೇತಿ ನೀಡಲಾಯಿತು.
ಎಸ್‌ಡಿಸಿ ಸಂಯೋಜಕ ಡಾ.ರಾಘವೇಂದ್ರ ರಾವ್ ಅತಿಥಿಗಳನ್ನು ಪರಿಚಯಿಸಿದರು. ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಬೋಧಕ ಸಿಬ್ಬಂದಿ ಇದ್ದರು.