ಜಿಲ್ಲೆ

ಜ್ಞಾನ ಪರಂಪರೆ ರಕ್ಷಣೆಗೆ ಬೌದ್ಧಿಕ ಆಸ್ತಿ ಹಕ್ಕು ಪೂರಕ: ಡಾ.ರಾಮಕೃಷ್ಣ ಬಿ. ಆಶಯ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಭಾರತದ ಸಮೃದ್ಧ ಜ್ಞಾನ ಪರಂಪರೆಯ ಹಲವು ವಿಶೇಷತೆಗಳ ಸೊಗಡಿನ ರಕ್ಷಣೆಗೆ ಬೌದ್ಧಿಕ ಆಸ್ತಿ ಹಕ್ಕು ಸಹಾಯಕವಾಗುತ್ತದೆ ಎಂದು ನಿಟ್ಟೆ ಡೀಮ್ಡ್ ಟುಬಿ ಯುನಿವರ್ಸಿಟಿಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಾನವಿಕ ವಿಭಾಗ ಪ್ರಾಧ್ಯಾಪಕ ಡಾ.ರಾಮಕೃಷ್ಣ ಬಿ. ಹೇಳಿದರು.

ಬುಧವಾರ ಉಜಿರೆಯ ಎಸ್‌ಡಿಎಂ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಘಟಕ ಇನ್ನೋವೇಟ್ ಆ್ಯಂಡ್ ಪ್ರೊಟೆಕ್ಟ್: ಪೇಟೆಂಟ್ಸ್, ಟ್ರೇಡ್‌ಮಾರ್ಕ್ಸ್, ಪಬ್ಲಿಷಿಂಗ್ ರೈಟ್ಸ್ ಕುರಿತು ಆಯೋಜಿಸಿದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ನಿರ್ದೇಶಕಿ, ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯಾ ಬಿ.ಪಿ. ಸ್ವಾಗತಿಸಿದರು. ಡಾ.ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಘಟಕದ ಸಂಘಟನಾ ಕಾರ್ಯದರ್ಶಿ ಡಾ.ನೆಫಿಸತ್ ವಂದಿಸಿದರು. ಉದ್ಘಾಟನಾ ಸಮಾರಂಭದ ಪೇಟೆಂಟಿಂಗ್ ಟು ಪ್ರೊಟೆಕ್ಟ್ ಇಂಟಲೆಕ್ಚುೃವಲ್ ಪ್ರಾಪರ್ಟಿ, ಐಪಿ ಮ್ಯಾನೇಜ್‌ಮೆಂಟ್ ಫಾರ್ ಸ್ಟಾರ್ಟಪ್ ಕುರಿತು ಡಾ.ರಾಮಕೃಷ್ಣ ಬಿ. ವಿಚಾರ ಮಂಡಿಸಿದರು.