ಜಿಲ್ಲೆ

ಅಕ್ಕಮಹಾದೇವಿ ವಿವಿಯಲ್ಲಿ ಕಾರ್ಯಾಗಾರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮಗಳ ಕುರಿತು ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಮೇರಾ ಯುವ ಭಾರತ್ ಮಂಡ್ಯ, ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ತಾಲೂಕಿನ ಬಿ.ಹೊಸೂರು ಕಾಲನಿಯಲ್ಲಿರುವ ವಿ.ವಿ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮಗಳ ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು.

ಮೇರಾ ಯುವ ಭಾರತ್ ಅಧಿಕಾರಿ ಶ್ರುತಿ ಹಾಗೂ ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಆರ್.ನಾಗಾನಂದ ಸರ್ಕಾರದ ಯೋಜನೆಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡಿದರು. ಸೈಬರ್ ಕ್ರೈಂ ವಿಭಾಗದ ಪೊಲೀಸ್ ಅಧಿಕಾರಿ ಮಂಜೇಗೌಡ ಸೈಬರ್ ಕ್ರೈಂ ವಂಚನೆಯಿಂದ ತಪ್ಪಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು. ಲೀಡ್ ಬ್ಯಾಂಕಿನ ವ್ಯವಸ್ಥಾಪಕ ಎನ್.ಅರುಣ್‌ಕುಮಾರ್ ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ಹಾಗೂ ಅಂಚೆ ಅಭಿವೃದ್ಧಿ ಅಧಿಕಾರಿ ಎಚ್.ಎಂ.ನಾಗರಾಜು ಅಂಚೆ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಅಧ್ಯಕ್ಷತೆಯನ್ನು ಕೇಂದ್ರದ ವಿಶೇಷಾಧಿಕಾರಿ ಪ್ರೊ.ವಿಷ್ಣು ಶಿಂಧೆ ವಹಿಸಿದ್ದರು. ವಾಣಿಜ್ಯ ವಿಭಾಗದ ಅಧ್ಯಾಪಕಿ ಡಾ.ಎನ್.ರಮ್ಯಾ, ಜೆ.ಎಸ್.ಹರ್ಶನ್, ಡಾ.ಕೆ.ಅಭಿಲಾಷ್ ಇತರರಿದ್ದರು.