Press kit for World Press Freedom Day - May 3. Contour drawing with spots of a hand with a microphone, a video camera, a pen and a notebook, a newspaper. Color illustration. Printing Stickers. 
ಜಿಲ್ಲೆ

ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮಾ.25 ಮತ್ತು 26 ರಂದು ಪತ್ರಿಕಾ ಬರಹ ಕೌಶಲ ಕುರಿತು ಕಾರ್ಯಾಗಾರ

ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆ್ಯಂಡ್ ರಿಸರ್ಚ್ (ಐಎಂಎಸ್‌ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪತ್ರಿಕಾ ಬರಹ ಕೌಶಲ ಕುರಿತು ಮಾ.25 ಮತ್ತು 26 ರಂದು ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

25ರಂದು ಬೆಳಗ್ಗೆ 10.30 ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಉದ್ಘಾಟನೆ ನಡೆಯಲಿದೆ. ಕಾರ್ಯಾಗಾರವನ್ನು ಮೈಸೂರು ವಿಶ್ವವಿದ್ಯಾಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಎನ್.ಮಮತಾ ಉದ್ಘಾಟಿಸುವರು. ಅಸ್ಸಾಂನ ಸಿಲ್ಚಾರ್‌ನ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ವಿ.ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕಾಲೇಜಿನ ಚೀಫ್ ಎಕ್ಸಿಕ್ಯೂಟಿವ್ ಪ್ರೊ.ಬಿ.ವಿ.ಸಾಂಬಶಿವಯ್ಯ ಅಧ್ಯಕ್ಷತೆ ವಹಿಸುವರು. ಪ್ರಾಂಶುಪಾಲ ಡಾ.ಎಂ.ಪ್ರಭು, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ತ್ರಿವೇಣಿ ಹಾಜರಿರುವರು.

ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರಾದ ಎಚ್.ಆರ್.ಶ್ರೀಶ, ಎಂ.ನಾಗರಾಜ, ಹೊನಕೆರೆ ನಂಜುಂಡೇಗೌಡ, ಡಾ.ಕೂಡ್ಲಿ ಗುರುರಾಜ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಪ್ರಟಕಟಣೆ ತಿಳಿಸಿದೆ.