ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿ ಧಾರವಾಡ ಪೀಠ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಮಧ್ಯಸ್ಥಿಕೆಗಾರರಿಗೆ 2 ದಿನಗಳ ಪುನರ್ ಮನನ ತರಬೇತಿ ಕಾರ್ಯಗಾರವನ್ನು ಜು. 27ರಂದು ಬೆಳಗ್ಗೆ 10 ಗಂಟೆಗೆ ಜಿಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಿ. ರಮಾ ಉದ್ಘಾಟಿಸುವರು. ಅತಿಥಿಗಳಾಗಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ಆನಂದಕುಮಾರ ಮಗದುಮ, ವಿ.ಡಿ. ಕಾಮರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಅಶೋಕ ಏಣಿಗಿ ಆಗಮಿಸುವರು. ತರಬೇತುದಾರರಾಗಿ ಲಕ್ಷ್ಮೀಶರಾವ್ ಹಾಗೂ ಬೀನಾ ದೇವರಾಜ್ ಭಾಗವಹಿಸುವರು.
ತರಬೇತಿಯಲ್ಲಿ ಧಾರವಾಡ, ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರು ಹಾಗೂ ಉಚ್ಚ ನ್ಯಾಯಾಲಯ ಧಾರವಾಡ ಪೀಠದ ಮಧ್ಯಸ್ಥಿಕೆಗಾರರು ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ತಿಳಿಸಿದ್ದಾರೆ.