ಜಿಲ್ಲೆ

ಜಿಲ್ಲಾಡಳಿತದಿಂದ ವಿಶ್ವ ಏಡ್ಸ್ ಜಾಗೃತಿ ಜಾಥಾ

ಆರ್.ಕೃಷ್ಣ

ಮೈಸೂರು: ವಿಶ್ವ ಏಡ್ಸ್ ಜಾಗೃತಿ ದಿನಾಚರಣೆ ಅಂಗವಾಗಿ ನಗರದಲ್ಲಿ ಭಾನುವಾರ ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆ, ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಏಡ್ಸ್ ಪ್ರತಿ ಬಂಧಕ ಮತ್ತು ನಿಂುಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಶುಶ್ರೂಷ ಮಹಾವಿದ್ಯಾಲಂು, ಎಂಎಂಸಿ ಮತ್ತು ಆರ್‌ಐ, ಲಯನ್ಸ್ ಜೀವಧಾರ ರಕ್ತ ನಿಧಿ ಕೇಂದ್ರ, ಆಶೋದಂು ಸಮಿತಿಯಿಂದ ನಗರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ನಗರದ ವಿವಿಧ ರಸ್ತೆಗಳಲ್ಲಿ ಜಾಥಾ ನಡೆಯಿತು.

ಜಾಥಾಗೆ ಚಾಲನೆ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಜಿ.ದಿನೇಶ್ ಮಾತನಾಡಿ, ಎಚ್‌ಐವಿ ಸೋಂಕು ಹರಡುವಿಕೆ ನಿಯಂತ್ರಣದಲ್ಲಿ ಭಾರತ ಉತ್ತಮ ಪ್ರಗತಿ ಸಾಧಿಸಿದೆ. ‘ನನ್ನ ಆರೋಗ್ಯ ನನ್ನ ಹಕ್ಕು’ ಸರ್ಕಾರದ ಘೋಷಣೆಯಂತೆ 2030ರೊಳಗೆ ಏಡ್ಸ್ ಪ್ರಕರಣಗಳನ್ನು ಶೂನ್ಯಕ್ಕೆ ತರಬೇಕು ಎಂದು ಅಭಿಪ್ರಾಯಪಟ್ಟರು.

1985ರಲ್ಲಿ ಪ್ರಪ್ರಥಮವಾಗಿ ಏಡ್ಸ್ ಪ್ರಕರಣ ಪತ್ತೆಯಾದ ಬಳಿಕ ಮಾರಕ ರೋಗ ಹರಡುವಿಕೆ ತಡೆಗಾಗಿ ಸಾಕಷ್ಟು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರ ಫಲವಾಗಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾತನಾಡಿ, ಎಚ್‌ಐವಿ ಏಡ್ಸ್ ಸೋಂಕು ಹರಡುವಿಕೆ ತಡೆಯಲು ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಾ ಬಂದಿರುವುದರಿಂದ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿರುವುದು ಜಾಗತಿಕ ಹಂತದಲ್ಲಿ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಎಂ.ಎಸ್.ಜಯಂತ್, ಜಿಲ್ಲಾ ಮೇಲ್ವಿಚಾರಕರಾದ ಎಸ್.ಸವಿತಾ, ಎಚ್.ಶ್ರೀಧರ್, ಕೆ.ಮಧುಕುವಾರ, ಪ್ರಂೋಗ ಶಾಲಾ ತಂತ್ರಜ್ಞರು, ಆಪ್ತಸವಾಲೋಚಕರು, ಅರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.