ಉಳ್ಳಾಲ: ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ರಕ್ತನಿಧಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಸಹಯೋಗದಲ್ಲಿ ಯೆನೆಪೋಯ(ಪರಿಗಣಿತ) ವಿಶ್ವವಿದ್ಯಾಲಯದ ಆವರಣದಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಿಸಲಾಯಿತು.
ವಿವಿಧ ರಕ್ತದಾನಿ ಸಂಸ್ಥೆಗಳ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಟಿಬಿ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಬದ್ರುದ್ದೀನ್ ಎಂ.ಎನ್ ಉದ್ಘಾಟಿಸಿದರು. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಹಬೀಬ್ ರಹಮಾನ್ ಎ.ಎ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಟಿಬಿ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಖತಿಜಾ ದಿಲ್ಶಾದ್ ಎಂಪಿ, ಆಸ್ಪತ್ರೆ ರಕ್ತನಿಧಿ ಮುಖ್ಯ ವೈದ್ಯಾಧಿಕಾರಿ ಡಾ.ವಿದ್ಯಾರೇಖಾ ಆರ್.ಕಾಮತ್ ಸ್ವಾಗತಿಸಿದರು. ಡಾ.ಗ್ಲೋರಿಯಾ ಕ್ವಾಡ್ರಸ್ ವಂದಿಸಿದರು.