ಜಿಲ್ಲೆ

ವಿಶ್ವಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಹ್ವಾನ

Mangaluru - Hariprasad Rai



ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ.28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಆಹ್ವಾನಿಸಿದರು. ಮಾಜಿ ಸಚಿವ ರಮಾನಾಥ್ ರೈ, ಮೈಸೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ನಂದ್ಯಪ್ಪ ಶೆಟ್ಟಿ ,
ಒಕ್ಕೂಟದ ನಿರ್ದೇಶಕ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಚಂದ್ರಹಾಸ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಉಪಸ್ಥಿತರಿದ್ದರು.