ವಿಜಯವಾಣಿ ಸುದ್ದಿಜಾಲ ಉಡುಪಿ
ಪರಿಸರ ಉತ್ತಮವಾಗಿದ್ದಲ್ಲಿ ಅಥವಾ ಶುಭ್ರ ಪರಿಸರ ಇದ್ದಲ್ಲಿ ಎಲ್ಲ ನಾವುಗಳೂ ಸೇರಿದಂತೆ ಎಲ್ಲ ಪ್ರಾಣಿಗಳ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅನಿಸಿಕೆ ವ್ಯಕ್ತಪಡಿಸಿದರು.
ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ನಮ್ಮ ಮನೆ ನಮ್ಮ ಮರ ಅಭಿಯಾನ ತಂಡದ ರವಿರಾಜ ಎಚ್.ಪಿ., ಗುರುರಾಜ ಸನಿಲ್, ಅವಿನಾಶ ಕಾಮತ, ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಪರಿಸರ ಪ್ರೇಮಿಗಳಾದ ಮಧುಸೂದನ ಹೇರೂರು, ರಾಘವೇಂದ್ರ ಪ್ರಭು ಕರ್ವಾಲು, ಸುನೀತಾ, ರಾಮಾಂಜಿ ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.