ಸುಜೀರ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಉಮ್ಮರ್ ಫಾರೂಕ್, ಪುದು ಗ್ರಾಪಂ ಅಧ್ಯಕ್ಷೆ ರಶೀದ ಮೊದಲಾದವರಿದ್ದರು. 
ಜಿಲ್ಲೆ

ಸುಜೀರ್ ಶಾಲೆಯಲ್ಲಿ ಬಹುಮಾನ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಆಶ್ರಯದಲ್ಲಿ, ಸುಜೀರ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಮಕ್ಕಳಿಗೆ ಗಿಡ ವಿತರಿಸಿ ಎಸ್‌ಡಿಎಂಸಿ ಅಧ್ಯಕ್ಷ ಉಮ್ಮರ್ ಫಾರೂಕ್ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಂಬೆ ವಲಯದ ಮೇಲ್ವಿಚಾರಕಿ, ವಿವಿಧ ಯೋಜನೆಗಳ ಮಾಹಿತಿ ನೀಡಿದರು. ಪುದು ಗ್ರಾಪಂ ಅಧ್ಯಕ್ಷೆ ರಶೀದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಫರಂಗಿಪೇಟೆ ಶ್ರೀ ರಾಮ ಶಾಲೆಯ ವ್ಯವಸ್ಥಾಪಕ ಆರ್.ಕೆ.ದೇವದಾಸ್ ಮಾಹಿತಿ ನೀಡಿದರು.
ಪುದು ಗ್ರಾಪಂ ಮಾಜಿ ಅಧ್ಯಕ್ಷ ರಮ್ಲಾನ್, ಮಾಜಿ ಉಪಾಧ್ಯಕ್ಷ ಇಕ್ಬಾಲ್ ಸುಜೀರ್, ವಲಯ ಒಕ್ಕೂಟಗಳ ಅಧ್ಯಕ್ಷೆ ಲೀಡಿಯಾ ಪಿಂಟೊ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜೀರ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಮಲ್ಲಿಕಾ, ವಿಎಲ್‌ಇ ದಿವ್ಯಾ, ಶಾಲಾ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ, ಶಾಲಾ ವಠಾರದಲ್ಲಿ ಗಿಡಗಳನ್ನು ನಾಟಿ ಮಾಡಲಾಯಿತು. ಪ್ರಭಾರ ಮುಖ್ಯಶಿಕ್ಷಕಿ ಗೀತಾ ಸ್ವಾಗತಿಸಿದರು. ಶಿಕ್ಷಕಿ ಹಿಲ್ಡಾ ಫಿರೇರಾ ವಂದಿಸಿದರು. ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.