ಜಿಲ್ಲೆ

ಉಪ್ಪರಕನಹಳ್ಳಿಯಲ್ಲಿ ಪರಿಸರ ದಿನದ ಆಚರಣೆ: ಗ್ರಾಮಾಂತರ ಬಿಜೆಪಿಯಿಂದ ಆಯೋಜನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ತಾಲೂಕಿನ ಉಪ್ಪರಕನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮತ್ತು ರಾಜ್ಯ ವೈದ್ಯಕೀಯ ಪ್ರಕೋಷ್ಟ ವತಿಯಿಂದ ವಿಶ್ವ ಪರಿಸರ ಮತ್ತು ತಾಯಂದಿರ ದಿನದ ಅಂಗವಾಗಿ ಸಸಿ ನೀಡುವ ಕಾರ್ಯಕ್ರಮಕ್ಕೆ ರಾಜ್ಯ ಕಾರ್ಯಕಾರಣಿ ಸದಸ್ಯ ಸಿದ್ದರಾಮಯ್ಯ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಳೆದ ಹನ್ನೊಂದು ವರ್ಷದಿಂದ ಸಸಿ ನೆಡುವ ಕಾರ್ಯಕ್ರಮವನ್ನು ಆಚರಿಸುತ್ತಾ ಬಂದಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಣತಿಯಂತೆ ಸಸಿ ನೆಟ್ಟು ಪೋಷಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆಗೆ ಒತ್ತು ನೀಡುವುದರಿಂದ, ಅದರಂತೆ ಪರಿಸರ ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ ಎಂದು ವಿವರಿಸಿದರು.

ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಆರ್.ಅಶೋಕ್ ಮಾತನಾಡಿ, ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದೊಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅದರಂತೆ ಸಸಿನೆಟ್ಟು ನೀರು ಹಾಕು ಸಂರಕ್ಷಿಸುವ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ. ಪ್ರತಿ ಗಿಡ ನೆಟ್ಟು ಫೋಷಣೆ ಮಾಡುವುದರಿಂದ ಪರಿಸರ ಸಂರಕ್ಷಣೆ ಜತೆಗೆ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ತಿಳಿಸಿದರು.

ವೈದ್ಯಕೀಯ ಪ್ರಕೋಷ್ಟದ ಸಹ ಸಂಚಾಲಕ ಡಾ.ಸದಾನಂದ ಮಾತನಾಡಿದರು. ಶಿವಕುಮಾರ್ ಆರಾಧ್ಯ, ಭೀಮೇಶ್, ಶಿವಲಿಂಗು ಚಂದ್ರು, ಪ್ರಸನ್ನ, ನಿತ್ಯಾನಂದ, ವೈರಮುಡಿ, ಕುಮಾರ್, ಶಶಿಕುಮಾರ್, ಸ್ವಾಮಿ ಇತರರಿದ್ದರು.