ಜಿಲ್ಲೆ

ವಿಶ್ವ ಕೈತೊಳೆಯುವ ದಿನಾಚರಣೆ

ಆದರ್ಶ್. ಎಂ.ಕೆ.

ಮಡಿಕೇರಿ: ಎಂ ಬಾಡಗ-೧ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಕೈತೊಳೆಯುವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿಗೆ ಕೀಲಿ ಎಂಬ ಘೋಷ ವಾಕ್ಯದೊಂದಿಗೆ ಇತ್ತೀಚೆಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.


ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಸ್ವಚ್ಛತೆ ಮತ್ತು ಕೈ ತೊಳೆಯುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯರಾದ ನಿಂಗಪ್ಪ, ಅಂಗನವಾಡಿ ಸಹಾಯಕಿ ಪ್ರೀತ, ಮಕ್ಕಳು ಮತ್ತು ಪಾಲಕರು ಹಾಜರಿದ್ದರು.