ಜಿಲ್ಲೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಡಗು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಈಚೆಗೆ "ವಿಶ್ವ ಮಾನಸಿಕ ಆರೋಗ್ಯ ದಿನ-2024" ಆಚರಿಸಲಾಯಿತು.

"ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ" ಎಂಬ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ಡಾ. ಆನಂದ್ ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಮುನಿರತ್ನಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಮುಖ್ಯ ಅತಿಥೀಯಾಗಿ ಪಾಲ್ಗೊಂಡಿದ್ದರು. ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ. ಡಾ. ರಾಘವ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಪ್ರಯುಕ್ತ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಅಶ್ವಿನಿ, ಆಶಿಕಾ, ವರ್ಷ ಟಿ.ವಿ. ಅವರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ರಾಷ್ಟ್ರೀಯ ಮಾನಸಿಕ ಆರೋಗ್ಯದ ವತಿಯಿಂದ "ಟೆಲಿ ಮನಸ್ಸು" ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಂಪನ್ಮೂಲ ವ್ಯಕ್ತಿ ಮನೋವೈದ್ಯ ಡಾ. ಡೇವಿನ್ ಕರ್ಕಡ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ಬಿ.ಎಸ್, ಎನ್.ಎಸ್.ಎಸ್. ಅಧಿಕಾರಿ ಡಾ. ಶೈಲಶ್ರೀ ಕೆ., ಅಲೋಕ್ ಬಿಜೈ ಇದ್ದರು.