ಜಿಲ್ಲೆ

ಕೂಡಿಗೆಯಲ್ಲಿ ವಿಶ್ವ ರೇಬಿಸ್ ದಿನಾಚರಣೆ

ಸುನಿಲ್ ಪೊನ್ನೇಟಿ

ಮಡಿಕೇರಿ
ವಿಶ್ವ ರೇಬಿಸ್ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಮಂಗಳವಾರ ರೇಬಿಸ್ ತಡೆಗೆ ಹಾಗೂ ಲಸಿಕೆಗಳು ಮಹತ್ವದ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ ವರ್ಷದ ವಿಶ್ವ ರೇಬಿಸ್ ದಿನಾಚರಣೆ “Breaking Rabies boundries”  (ರೇಬಿಸ್ ಗಡಿಯನ್ನು ಮುರಿಯುವುದು) ಎಂಬ ಧ್ಯೇಯದೊಂದಿಗೆ ಏರ್ಪಡಿಸಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರೇಬಿಸ್ ನೋಡಲ್ ಅಧಿಕಾರಿ ಡಾ.ಕೃತಿಕಾ, ರೇಬಿಸ್ ರೋಗ ಎಷ್ಟು ಮಾರಕ, ರೇಬಿಸ್ ಕಾಯಿಲೆ ಹರಡುವ ಬಗೆ, ರೇಬಿಸ್ ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಬಗ್ಗೆ ವಿವರಿಸಿದರು.
ಜಿಲ್ಲ್ಲಾ ಶಸ್ತçಚಿಕಿತ್ಸಕ ಡಾ. ನಜುಂಡಯ್ಯ ಮಾತನಾಡಿ ರೇಬಿಸ್ ಕಾಯಿಲೆಯ ಮಾರಕತೆ ಮತ್ತು ಸೂಕ್ತ ಲಸಿಕೆ ಪಡೆಯುವುದರ ಅನಿವಾರ್ಯತೆ ಬಗ್ಗೆ ಮಾಹಿತಿ ನೀಡಿದರು.
ಸಮುದಾಯ ವೈದ್ಯಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್, ರೇಬಿಸ್ ನಿಯಂತ್ರಣ ಮಾಡುವಲ್ಲಿ ಇತರೆ ಇಲಾಖೆಗಳ ಪಾತ್ರದ ಬಗ್ಗೆ ವಿವರಿಸಿದರು.
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ದೀಪಿಕಾ, ಆರೋಗ್ಯ ನಿರೀಕ್ಷಕ ಮುಖೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತç ವಿಭಾಗದ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗೃಹ ವೈದ್ಯರು ರೇಬಿಸ್ ಹರಡುವಿಕೆ ತಡೆಗಟ್ಟುವಿಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.