ಗದಗ: ವಿಶ್ವ ರೇಬಿಸ್ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಹಾಗೂ ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಬಿ.ಸಿ.ಕರಿಗೌಡರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ರೇಬಿಸ್ ಒಂದು ವೈರಾಣುವಿನಿಂದ ಹರಡುವ ಮಾರಕ ಖಾಯಿಲೆ ಇದ್ದು, ಇದರ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ರೋಗವನ್ನು ಸೋಲಿಸುವಲ್ಲಿ ಪ್ರಗತಿಯನ್ನು ಸಾಧಿಸಲು ಈ ದಿನವನ್ನು ವಾರ್ಷಿಕವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ್ ರವರು ಮಾತನಾಡಿ ರೇಬಿಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿದ ಸೂಕ್ಷö್ಮ ಜೀವ ಶಾಸ್ತçಜ್ಞ ಲೂಯಿಸ್ ಪಾಶ್ಚ್ರ‍್ಚ್ ಅವರ ಮರಣದ ವಾರ್ಷಿಕೋತ್ಸವವನ್ನು ವಿಶ್ವ ರೇಬಿಸ್ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷದಲ್ಲಿ “ರೇಬಿಸ್ ಗಡಿಗಳನ್ನು ಮೀರಿ ಮುಂದುವರೆಯೋಣ” ಎಂಬ ಘೋಷವಾಕ್ಯದೊಂದಿಗೆ ವಿಶ್ವ ರೇಬಿಸ್ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಇದೊಂದು 100% ಮಾರಕ ರೋಗವಾಗಿದ್ದು, 100% ಇದನ್ನು ತಡೆಗಟ್ಟಬಹುದಾಗಿದೆ. ವರ್ಷಕ್ಕೆ 20 ಸಾವಿರ ಸಾವುಗಳು ಭಾರತದಲ್ಲಿ ರೇಬಿಸ್‌ನಿಂದ ಆಗುತ್ತಿವೆ. ರೇಬಿಸ್ ಲಸಿಕೆಯ ಬಗ್ಗೆ ಭಯ ಬಿಟ್ಟು ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳಬಹುದು.
ನಾಯಿ, ಬೆಕ್ಕು ಇತರೇ ಪ್ರಾಣಿಗಳು ಕಚ್ಚಿದಾಗ ನಿರ್ಲಕ್ಷö್ಯವಹಿಸದೇ ತಕ್ಷಣವೇ ಗಾಯವನ್ನು ಸೋಪು ಹಾಕಿ 15 ನಿಮಿಷಗಳವರೆಗೆ ಚೆನ್ನಾಗಿ ತೊಳೆದು ನಂತರ ನಂಜು ನಿರೋಧಕ ದ್ರಾವಣ ಲೇಪಿಸಿ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಹೇಳಿದರು. ಸಾಮಾನ್ಯವಾಗಿ ರೇಬಿಸ್ ಸೋಂಕು ಹೊಂದಿದ ಪ್ರಾಣಿಗಳಲ್ಲಿ ನಾಯಿಗಳಿಂದ 97% ರಷ್ಟು, ಬೆಕ್ಕುಗಳಿಂದ 2% ಹಾಗೂ ಇತರೇ ಪ್ರಾಣಿಗಳಿಂದ 1% ರಷ್ಟು ರೋಗ ಹರಡುವ ಸಾಧ್ಯತೆಯಿದೆ. ಇವುಗಳ ಕಡಿತದಿಂದ, ಪರಚುವಿಕೆಯಿಂದ, ತೆರೆದ ಚರ್ಮದ ಮೇಲೆ ನೆಕ್ಕುವಿಕೆಯಿಂದ, ಜೊಲ್ಲಿನ ಸಂಪರ್ಕದಿAದ ರೋಗ ಹರಡುವ ಸಾಧ್ಯತೆ ಇದ್ದು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಗಳು ಲಭ್ಯವಿರುವಂತೆ ಕ್ರಮ ವಹಿಸಲಾಗಿದೆ ಎಂದುÀ ತಿಳಿಸಿದರು
ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್ ದ ಪ್ರಾಂಶುಪಾಲರು ಹಾಗೂ ಶಸ್ತç ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಜ್ಯೋತಿ ಕರಿಗೌಡರ ಅವರು ಮಾತನಾಡಿ ಹಾಲುಣಿಸುವ ತಾಯಂದಿರು 1 ವರ್ಷದೊಳಗಿನ ಮಕ್ಕಳು ಮತ್ತು ವಯಸ್ಕರು ಸಹ ಪ್ರಾಣಿಗಳು ಕಡಿದಾಗ ರೇಬಿಸ್ ವಿರುದ್ಧ ಲಸಿಕೆಯನ್ನು ತಪ್ಪದೇ ತೆಗೆದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು ಹಾಗೂ ಸಾಕು ಪ್ರಾಣಿಗಳಿಗೂ ಕೂಡ ತಪ್ಪದೇ ಪ್ರತಿವರ್ಷ ಲಸಿಕೆ ಹಾಕಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಸಂಗಮೇಶ ಅಸೂಟಿ, ಡಾ.ಶ್ರೀನಿವಾಸ ಆರೇರ ಮುಖ್ಯಸ್ಥರು ಚಿಕ್ಕಮಕ್ಕಳ ವಿಭಾಗ, ರೂಪಸೇನ ಚವ್ಹಾನ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಮ್ಸ್ ನರ್ಸಿಂಗ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, ಉಪನ್ಯಾಸಕರು/ ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲಾ ಸಮೀಕ್ಷಣಾ ಘಟಕದ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಎಂ.ಎಸ್. ರಬ್ಬನಗೌಡ್ರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಜಿಲ್ಲಾ ಸಮೀಕ್ಷಣಾ ಘಟಕ, ಗದಗ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.