ಜಿಲ್ಲೆ

ವಿಶ್ವ ಪಾರ್ಶ್ವವಾಯು ದಿನಾಚರಣೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ಪಾರ್ಶ್ವವಾಯು ಸಂಭವಿಸಿದಾಗ ಗೋಲ್ಡನ್​ ಅವರ್​ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದಾಗ ವ್ಯಕ್ತಿಯು ಶೀಘ್ರವಾಗಿ ಗುಣಮುಖರಾಗುತ್ತಾರೆ. ಇಂತಹ ಸಂದರ್ಭಗಳಲ್ಲಿ ಪ್ರತಿ ನಿಮಿಷವೂ ಎಣಿಕೆಯಾಗುತ್ತದೆ ಎಂದು ಕೆಎಂಸಿಯ ಸಮುದಾಯ ವೈದ್ಯಕಿಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಅಖಿಲಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೆಎಂಸಿ ಸಮುದಾಯ ವೈದ್ಯಕಿಯ ವಿಭಾಗ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಮೆದುಳು ಆರೋಗ್ಯ ಉಪಕ್ರಮ ಸಹಯೋಗದೊಂದಿಗೆ ಬೋರ್ಡ್​ ಹೈಸ್ಕೂಲಿನಲ್ಲಿ ನಡೆದ ವಿಶ್ವ ಪಾರ್ಶ್ವವಾಯು ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.

ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಲತಾ ನಾಯಕ್​ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್​ ಎಚ್​. ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕಿ ಅರ್ಪಿತಾ ಸೇವಾ ಸೌಲಭ್ಯಗಳ ಬಗ್ಗೆ ವಿವರಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಕ್ಲಿನಿಕಲ್​ ಸೈಕಾಲಜಿಸ್ಟ್​ ಹರ್ಷಲ್​, ನಗರ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಶಾಂತಿ ಉಪಸ್ಥಿತರಿದ್ದರು. ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.