ಕಾರವಾರ: ತಂಬಾಕು ಉತ್ಪನ್ನಗಳ ಆಕರ್ಷಕ ಜಾಹೀರಾತುಗಳಿಂದ ಪ್ರೇರೆಪಿತರಾಗಿ, ದುಶ್ಚಟಗಳಿಗೆ ಬಲಿಯಾಗದಂತೆ ಇಂದಿನ ಯುವ ಪಿಳಿಗೆಯನ್ನು ರಕ್ಷಿಸಿ, ತಂಬಾಕು ರಹಿತ ಸಮಾಜ ಮಾಡಲು ಸಮಾಜದ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕಟುಂಭ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕುನಿಯಂತ್ರಣ ಕೋಶ, ಜಿ.ಎನ್.ಎಮ್.ಟಿ.ಸಿ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವ ಪಿಳಿಗೆಯನ್ನು ಆಕರ್ಷಿಸಲು ಉದ್ಯಮದಾರರು ಅನೇಕ ಆಕರ್ಷಕವಾದ ಜಾಹೀರಾತುಗಳನ್ನು ನೀಡುವ ಮೂಲಕ ಯುವ ಜನತೆಯನ್ನು ದುಶ್ಚಟಗಳಿಗೆ ಒಳಗಾಗುವಂತೆ ಮಾಡುತ್ತಾರೆ. ಯುವ ಜನತೆ ಇಂತಹ ಜಾಹೀರಾತುಗಳಿಗೆ ಮಾರು ಹೋಗದೇ ತಂಬಾಕು ರಹಿತ ಸಮಾಜ ನಿರ್ಮಾಣ ಮಾಡಲು ಕೆಳ ಹಂತದಿAದಲೇ ಪ್ರಯತ್ನಿಸಬೇಕು ಎಂದರು.
ಇತ್ತಿಚಿನ ದಿನಗಳಲ್ಲಿ ಮಕ್ಕಳು ಮತ್ತು ಯುವ ಜನತೆ ಚಿಕ್ಕ ಚಿಕ್ಕ ವಿಷಯಗಳನ್ನು ಮನಸ್ಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಅಂತ್ಯಗೊಳಿಕೊಳ್ಳುವುದು ಹೆಚ್ಚಾಗಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳ ಆಗು ಹೋಗುಗಳನ್ನು ಆಗಾಗ ಗಮನಿಸಿ, ಮಕ್ಕಳನ್ನು ಸುರಕ್ಷಿತವಾಗಿ ಬೆಳಸಬೇಕು. ಆಗ ಮಾತ್ರ ಉತ್ತಮ ಪ್ರಜೆಯನ್ನು ದೇಶಕ್ಕೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಜೊತೆಗೆ ಕಾನೂನು ಸೇವೆಗಳ ಪ್ರಾಧಿಕಾರವು ಜನರಲ್ಲಿ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮಾತನಾಡಿ, ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಎಷ್ಟೇ ಅರಿವು ಮೂಡಿಸಿದರೂ ಅದರ ಸೇವನೆ ಕಡಿಮೆಯಾಗದಿರುವುದು ವಿಪರ್ಯಾಸ. ಅನೇಕ ಕಡೆ ಯಾವುದೇ ಅಂಜಿಕೆ ಅಳಕು ಇಲ್ಲದೇ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತದೆ ಎಂದರು.
ಇತ್ತೀಚೆಗೆ ನಗರದ ಕೆಲವು ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಿ, ಅರಿವು ಮೂಡಿಸಿದರೂ ಸಹ ಅವುಗಳ ಮಾರಾಟ ನಿಂತಿಲ್ಲ. ಇದರಿಂದಾಗಿ ಯುವ ಪಿಳಿಗೆ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ದುಶ್ಚಟಗಳಿಂದ ಯುವ ಪೀಳಿಗೆ ದೂರವಿರಲು ಅನೇಕ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ದುಶ್ಚಟಗಳಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವಿದ್ದರೂ ಕ್ಷಣದ ಸುಖಕ್ಕಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುವ ಯುವ ಜನತೆ ಆತ್ಮವಲೋಕನ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಾಧಿಕಾರಿ ಡಾ.ಅರ್ಚನಾ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, 1987 ರಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ ಈ ವರ್ಷದ ಧ್ಯೇಯ ವಾಕ್ಯ “ತಂಬಾಕು ಉದ್ಯಮ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು.”ಇತ್ತಿಚೆನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ದುಶ್ಚಟಗಳಿಗೆ ಒಳಗಾಗುತ್ತಿದ್ದು, ಅಂತಹ ಮಕ್ಕಳನ್ನು ಗುರುತಿಸಿ ಅವರಿಗೆ ಆಪ್ತ ಸಮಾಲೋಚನೆ ಮೂಲಕ ದುಶ್ಚಟಗಳಿಂದ ಹೊರತಂದು,ಆರೋಗ್ಯಕರ ತಂಬಾಕು ಮುಕ್ತ ಯುವ ಪೀಳಿಗೆ ರೂಪಿಸಲು ಕೈ ಜೋಡಿಸಬೇಕು ಎಂದರು.
ವಿಶ್ವದಲ್ಲಿ ಪ್ರತೀ ವರ್ಷ 80 ಲಕ್ಷ ಜನ ತಂಬಾಕು ಸೇವನೆಯಂದ ಮರಣ ಹೊಂದುತ್ತಿದ್ದಾರೆ. ಅದರಲ್ಲಿ 70 ಲಕ್ಷ ಜನ ನೇರ ತಂಬಾಕು ಸೇವನೆಯಿಂದ ಸಾವಿಗೀಡಾದರೆ, 10 ಲಕ್ಷ ಜನ ಸುತ್ತಮುತ್ತಲಿನ ಜನ ದೂಮಪಾನ ಮಾಡುವುದರ ಹೊಗೆಯಿಂದ ತಮ್ಮ ಪ್ರಾಣವನ್ನು ಬಿಡುತ್ತಿದ್ದಾರೆ.ತಂಬಾಕು ತಾನು ಸುಡುವುದಲ್ಲದೇ ಇತರರನ್ನು ಸುಡುತ್ತದೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಕೋಪ್ಟಾ ಕಾಯ್ದೆ ಬಂದ ನಂತರ ತಂಬಾಕು ಸೇವನೆ ಕಡಿಮೆಯಾಗುತ್ತಾ ಬಂದಿದ್ದು, ಇನ್ನೂ ಪೂರ್ಣ ಪ್ರಮಾಣದಲ್ಲಿ ತಂಬಾಕು ಸೇವನೆ ಕಡಿಮೆ ಮಾಡಲು ಇಲಾಖೆಯ ವತಿಯಿಂದ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ಕೋಶವು ಜಿಪಿಎಸ್ ಆಧಾರಿತ “ಸ್ಟಾಪ್ ಟೊಬ್ಯಾಕೋ”ಮೊಬೈಲ್ ಅಪ್ಲಿಕೇಶನ್‌ನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ಧೂಮಪಾನ ಮಾಡುವುದು ಕಂಡುಬAದರೆ, ಅದನ್ನು ಉಲ್ಲಂಘಿಸುವವರ ಛಾಯಾಚಿತ್ರವನ್ನು ತೆಗೆದುಕೊಂಡು ಅದನ್ನು ಈ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಿದಲ್ಲಿ, ತಂಬಾಕು ನಿಯಂತ್ರಣ ಕೋಶದ ತಂಡವು ಸ್ಥಳಕ್ಕೆ ಧಾವಿಸಿ, ಕಾನೂನು ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತದೆ. ಹಾಗೂ ಈ ಆ್ಯಪ್ ಮೂಲಕ ಕೋಪ್ಟಾ ಕಾಯ್ದೆಯ ನಿಯಮಗಳು, ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತ ಮಾಹಿತಿ ನೀಡಲಿದೆ ಎಂದರು.
ಇದೇ ಸಂದರ್ಭದಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡದ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಜಿಎನ್‌ಎಮ್‌ಟಿಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಿರುಚಿತ್ರ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ, ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ ಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣ ವಸ್ತçದ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಶಂಕರ ರಾವ್, ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕನ್ನಕ್ಕನವರ ಸ್ವಾಗತಿಸಿದರು. ಗೋರೆಸಾ¨ ನದಾಫ್ ನೀರೂಪಿಸಿದರು. ಜಿಲ್ಲಾ ತಂಬಾಕು ನಿಯಂತ್ರಣಕೋಶದ ಜಿಲ್ಲಾ ಸಲಹೆಗಾರ ಪ್ರೇಮಕುಮಾರ್ ನಾಯ್ಕ ವಂದಿಸಿದರು.