ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಧಾರವಾಡ ಪ್ರೆಸ್ಟೀಜ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸೆ. 27ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಎನ್.ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಭರಮಗೌಡ ಅಲಗೌಡ ಕಾಗೆ, ಜೆ.ಎನ್.ಗಣೇಶ, ಎಸ್.ವಿ.ಸಂಕನೂರ, ಪ್ರದಿಪ ಶೆಟ್ಟರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ನಿಗಮ ಮಂಡಳಿ ಅಧ್ಯಕ್ಷರು, ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.