ಚಿಕ್ಕಮಗಳೂರು ತಾಲೂಕಿನ ದತ್ತಪೀಠಕ್ಕೆ ತೆರಳಿದ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ದತ್ತಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಎಚ್.ಸಿ.ಕಲ್ಮರುಡಪ್ಪ, ಎಂ.ಆರ್.ದೇವರಾಜ ಶೆಟ್ಟಿ ಮತ್ತಿತರರಿದ್ದರು. 
ಜಿಲ್ಲೆ

ದತ್ತಪೀಠದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶನಿವಾರ ಬೆಳ್ಳಂಬೆಳಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದರು.

ಬಿಜೆಪಿ ನಾಯಕರೊಂದಿಗೆ ದತ್ತಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲಕಾಲ ಅಲ್ಲಿಯೇ ಕುಳಿತು ಧ್ಯಾನಿಸಿದರು. ಇದಕ್ಕೂ ಮುನ್ನ ಚಿಕ್ಕಮಗಳೂರು ನಗರದಲ್ಲಿ ಮುಂಜಾನೆಯೇ ಓಡಾಟ ನಡೆಸಿ ತಳ್ಳುಗಾಡಿಯಲ್ಲಿ ಬನ್ಸ್ ತಿಂದು ಸರಳತೆ ಮೆರೆದರು. ಇದಾದ ನಂತರ ಬಿಜೆಪಿ ಕಚೇರಿಗೆ ತೆರಳಿ, ಸಾಲು ಸಾಲು ಸಭೆಗಳನ್ನು ನಡೆಸುವ ಮೂಲಕ ಬಿಜೆಪಿ ಬಂಡಾಯ ಶಮನಕ್ಕೆ ಮುಂದಾದರು. ಸಂಜೆ ವೇಳೆಗೆ ತರೀಕೆರೆಗೆ ತೆರಳಿ ಕಾರ್ಯಕರ್ತರ ಸಭೆ ನಡೆಸಿದರು.