aaradhanotsava 
ಜಿಲ್ಲೆ

ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆರಾಧನೋತ್ಸವ

ಕುಂದಾಪುರ: ವೃಂದಾವನಸ್ಥ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆರಾಧನೋತ್ಸವವನ್ನು ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಆಚರಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆದವು. ದಿ.ಎನ್.ಜಯವಂತ ನಾಯಕ್ ಕುಟುಂಬಸ್ಥರ ಪರವಾಗಿ ಡಾ.ಸುಖಾನಂದ ಶೆಣೈ ದಂಪತಿ ಮತ್ತು ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಅವರು ಸೇವೆ ಸಮರ್ಪಿಸಿದರು. ಶ್ರೀಗಳ ಜನ್ಮದಿನೋತ್ಸವದ ಅಂಗವಾಗಿ ಶ್ರೀ ವೆಂಕಟರಮಣ ದೇವರಿಗೆ ಮಧ್ಯಾಹ್ನ ಪ್ರಸನ್ನಪೂಜೆ, ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ದೇವಳದ ಆಡಳಿತ ಮಂಡಳಿಯ ಜಿ.ವೇದವ್ಯಾಸ ಕೆ.ಆಚಾರ್ಯ, ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಜಿಎಸ್‌ಬಿ ಸಮಾಜ ಬಾಂಧವರು ಮತ್ತಿತರರು ಉಪಸ್ಥಿತರಿದ್ದರು.