ಕಲಾದಗಿ: ನಾಡಿನ ಪ್ರತಿಷ್ಠಿತ ವೀರಶೈವ ಮಠಗಳಲ್ಲೊಂದಾದ ಗ್ರಾಮದ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದಲ್ಲಿ ಲಿಂ.ಪಡದಪ್ಪಯ್ಯ ಅವರ 50 ನೇ ಹಾಗೂ ಲಿಂ. ಚಂದ್ರಶೇಖರ ಶಿವಾಚಾರ್ಯರ 10 ನೇ ಪುಣ್ಯಾರಾಧನೆ ಮಂಗಳವಾರ ಶ್ರದ್ಧಾ ಭಕ್ತಿಯಿಂದ ಜರುಗಿತು.
ಗಂಗಾಧರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಪೂಜ್ಯದ್ವಯರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸೇರಿ ಇತರ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು. ಕರ್ತೃ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಕೆಎಲ್ಡಿಜಿ&9&1:
ಕಲಾದಗಿಯ ಶ್ರೀ ಗುರುಲಿಂಗೇಶ್ವರ ಮಠದಲ್ಲಿ ಪುಣ್ಯಾರಾಧನೆ ನಿಮಿತ್ತ ಚಂದ್ರಶೇಖರ ಶಿವಾಚಾರ್ಯರ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಲಾಯಿತು. ಗಂಗಾಧರ ಮಹಾಸ್ವಾಮಿಗಳು ಮತ್ತು ಭಕ್ತರು ಇದ್ದರು.