ಬೀದರ್: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ನಗರದ ಗುಂಪಾ ರಸ್ತೆಯಲ್ಲಿ ಇರುವ ಸಪ್ನಾ ಮಲ್ಟಿಫ್ಲೆಕ್ಸ್ ಸಭಾಂಗಣದಲ್ಲಿ ಸೆ. 17 ರಂದು ಬೆಳಿಗ್ಗೆ 11.30ಕ್ಕೆ ಡಾ. ಈಶ್ವರಯ್ಯ ಕೊಂಡಬಲ್ ರಚಿತ ‘ಗುರು ಕಾರುಣ್ಯದ ಬಳವಂತರಾವ್ ಪಾಂಡ್ರೆ’ ಕೃತಿ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಪುಸ್ತಕ ಬಿಡುಗಡೆ ಮಾಡುವರು. ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಡಾ. ಬಸವಲಿಂಗ ಅವಧೂತರು ಸಾನಿಧ್ಯ ವಹಿಸುವರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಸದಾನಂದ ಜೋಶಿ ಕೃತಿ ಪರಿಚಯ ನೀಡುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ, ಎನ್.ಜಿ.ಒ. ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ, ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೋರಾ ಮತ್ತಿತರರು ಪಾಲ್ಗೊಳ್ಳುವರು. ಪ್ರಾಥಮಿಕ ಶಾಲೆ ನಿವೃತ್ತ ಮುಖ್ಯಶಿಕ್ಷಕ ಬಳವಂತರಾವ್ ಪಾಂಡ್ರೆ, ಸಾಹಿತಿ ಡಾ. ಈಶ್ವರಯ್ಯ ಕೊಡಂಬಲ್ ಉಪಸ್ಥಿತರಿರುವರು ಎಂದು ಹೇಳಿಕೆ ತಿಳಿಸಿದೆ.