ಜಿಲ್ಲೆ

ರಾಜ್ಯ ಕಾರ್ಯದರ್ಶಿಯಾಗಿ ಕಂದಗೂಳೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಯುವ ಮುಖಂಡ ರಾಜಕುಮಾರ ಕಂದಗೂಳೆ ಅವರನ್ನು ನೇಮಕ ಮಾಡಲಾಗಿದೆ. ವಿಭಾಗದ ರಾಜ್ಯ ಅಧ್ಯಕ್ಷ ಕೆ.ಪಿ. ಪಾಲಯ್ಯ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜಕುಮಾರ ಕಂದಗೂಳೆ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಜಿಲ್ಲಾ ಘಟಕದ ವಿವಿಧ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಹೀಗಾಗಿ ಅವರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ.
ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ್ದಕ್ಕೆ ಕಂದಗೂಳೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ವಿಭಾಗದ ರಾಜ್ಯ ಅಧ್ಯಕ್ಷ ಕೆ.ಪಿ. ಪಾಲಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.