ಜಿಲ್ಲೆ

ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಜಿಲ್ಲೆಯ ಎಲ್ಲ ಎಂಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸಂಜೀವಕುಮಾರ ಪಾಟೀಲ್ ಜ್ಯಾಂತಿ ಆಗ್ರಹಿಸಿದ್ದಾರೆ.
ಜಿಲ್ಲಾದ್ಯಂತ ಮಳೆಯ ಅಭಾವ ಇದೆ. ಆದರೆ ಬಸವಕಲ್ಯಾಣ, ಹುಲಸೂರು ಹಾಗೂ ಭಾಲ್ಕಿ ತಾಲೂಕು ಮಾತ್ರ ಬರಪೀಡಿತ ಪಟ್ಟಿಯಲ್ಲಿ ಸರ್ಕಾರ ಸೇರಿಸಿದೆ. ಇನ್ನುಳಿದ ಐದು ತಾಲೂಕುಗಳನ್ನು ನಿರ್ಲಕ್ಷ್ಯ ವಹಿಸಲಾಗಿದೆ. ಶೀಘ್ರದಲ್ಲಿ ಐದು ತಾಲೂಕುಗಳನ್ನು ಬರಗಾಲವೆಂದು ಘೋಷಣೆ ಮಾಡಬೇಕು. ನಿರ್ಲಕ್ಷ್ಯ ಮಾಡಿದರೆ ಸರ್ಕಾರದ ವಿರುದ್ಧ ರೈತ ಮೋರ್ಚಾದಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.