ಜಿಲ್ಲೆ

ಶಾಸಕ ಕಾಗೆ ಹೇಳಿಕೆಗೆ ಖಂಡನೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಶುಶ್ರೂಷಾಧಿಕಾರಿಗಳ ಕುರಿತು ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆಯನ್ನು ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಸಂಘದ ರಾಜ್ಯ ಅಧ್ಯಕ್ಷ ರಾಜಕುಮಾರ ಮಾಳಗೆ ತೀವ್ರವಾಗಿ ಖಂಡಿಸಿದ್ದಾರೆ.
ಸಾರ್ವಜನಿಕ ಸಮಾರಂಭದಲ್ಲಿ ಶುಶ್ರೂಷಾಧಿಕಾರಿಗಳ ಬಗ್ಗೆ ಲಘುವಾಗಿ ಮಾತನಾಡಿರುವುದು ಶಾಸಕರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಶುಶ್ರೂಷಾಧಿಕಾರಿಗಳು ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಜನರ ಪ್ರಾಣ ಉಳಿಸಿದ್ದಾರೆ. ಬಣ್ಣಿಸಬೇಕಿದ್ದರೆ ಅವರ ಒಳ್ಳೆಯ ಕಾರ್ಯಗಳನ್ನು ಬಣ್ಣಿಸಬೇಕು. ಅದನ್ನು ಬಿಟ್ಟು ಆಕ್ಷೇಪಾರ್ಹ ಮಾತುಗಳನ್ನಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಶುಶ್ರೂಷಾಧಿಕಾರಿಗಳ ಗೌರವಕ್ಕೆ ಚ್ಯುತಿ ತರುವ ಹೇಳಿಕೆಗಳು ಪುನರಾವರ್ತನೆಯಾಗಬಾರದು. ಶುಶ್ರೂಷಾಧಿಕಾರಿಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆಗಳನ್ನು ಸಹಿಸಲಾಗದು ಎಂದು ಎಚ್ಚರಿಸಿದ್ದಾರೆ.