ಬೀದರ್: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್‍ಕೆಸಿಸಿಐ)ಯ ಎಪಿಎಂಸಿ ಕಮಿಟಿ ಸದಸ್ಯರಾಗಿ ಇಲ್ಲಿಯ ಖ್ಯಾತ ಉದ್ಯಮಿ ಬಸವರಾಜ ಧನ್ನೂರ ಅವರನ್ನು ನೇಮಕ ಮಾಡಲಾಗಿದೆ.
ಸಂಸ್ಥೆಯ ಎಪಿಎಂಸಿ ಕಮಿಟಿ ಅಧ್ಯಕ್ಷ ಸಂಜಯ್ ಭಾಸಿನ್ ಅವರು 2023-24ನೇ ಸಾಲಿನ ಅವಧಿಗೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬಸವರಾಜ ಧನ್ನೂರ ಅವರು ಎರಡೂವರೆ ದಶಕದಿಂದ ಉದ್ಯಮ ಕ್ಷೇತ್ರದಲ್ಲಿದ್ದಾರೆ. ಗಾಂಧಿಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಬೀದರ್ ದಾಲ್ ಮಿಲ್ ಓನರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಹಾಗೂ ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯಕಾರಿಣಿ ಮಂಡಳಿ ಸದಸ್ಯರಾಗಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದಾರೆ. ರೈತರು ಹಾಗೂ ವ್ಯಾಪಾರಿಗಳ ಹಿತ ರಕ್ಷಣೆಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ, ಈ ನೇಮಕ ಮಾಡಲಾಗಿದೆ.
ಬಸವರಾಜ ಧನ್ನೂರ ಅವರನ್ನು ಎಫ್‍ಕೆಸಿಸಿಐಗೆ ನೇಮಕ ಮಾಡಿದ್ದಕ್ಕೆ ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ ಹಾಗೂ ಕಾರ್ಯಕಾರಿಣಿ ಮಂಡಳಿ ಸದಸ್ಯರು ಸಂತಸ ವ್ಯಕ್ತಪಡಿಸಿ,
ಅಭಿನಂದನೆ ತಿಳಿಸಿದ್ದಾರೆ.