ಜಿಲ್ಲೆ

ಕರ್ನಾಟಕ ಬಸ್‍ಗೆ ಬೆಂಕಿ, ತೀವ್ರ ಖಂಡನೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಮಹಾರಾಷ್ಟ್ರದಲ್ಲಿ ಮರಾಠ ಮೀಸಲು ಹೋರಾಟದ ವೇಳೆ ಕಿಡಿಗೇಡಿಗಳು ಕರ್ನಾಟಕದ ಬಸ್ಸಿಗೆ ಬೆಂಕಿ ಹಚ್ಚಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ತೀವ್ರವಾಗಿ ಖಂಡಿಸಿದ್ದಾರೆ.
ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್‍ನ್ನು ತಡೆದು, ಪ್ರಯಾಣಿಕರನ್ನು ಕೆಳಗಿಳಿಸಿ, ಬಸ್‍ಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದ್ದಾರೆ.
ಪ್ರತಿಭಟನಾಕಾರರು ತಮ್ಮ ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ನಡೆಸಲು ನಡೆಸಲು ನಮ್ಮದೇನೂ ಅಭ್ಯಂತರ ಇಲ್ಲ. ಆದರೆ, ಕರ್ನಾಟಕದ ಬಸ್‍ಗೆ ಹಾನಿ ಉಂಟು ಮಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕನ್ನಡಿಗರು-ಮರಾಠಿಗರು ಅಣ್ಣ ತಮ್ಮಂದಿರಂತೆ ಇದ್ದಾರೆ. ಪ್ರತಿಭಟನಾಕಾರರ ಕೃತ್ಯದಿಂದ ಕನ್ನಡಿಗರ ಭಾವನೆಗೆ ಧಕ್ಕೆ ಉಂಟಾಗಿದೆ. ಎರಡೂ ರಾಜ್ಯಗಳ ಸಂಬಂಧವೂ ಹಾಳಾಗಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಬಸ್‍ಗೆ ಬೆಂಕಿಯಂತಹ ಘಟನೆಗಳು ಪುನರಾವರ್ತನೆಯಾದಲ್ಲಿ ಸಹಿಸಲಾಗದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಸ್‍ಗೆ ಬೆಂಕಿ ಹಚ್ಚಿದ್ದರಿಂದ ಆಗಿರುವ ನಷ್ಟವನ್ನು ಮಹಾರಾಷ್ಟ್ರ ಸರ್ಕಾರ ಭರಿಸಬೇಕು. ಕಿಡಿಗೇಡಿಗಳ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.