ಜಿಲ್ಲೆ

ಸಮಾನ ಹಕ್ಕು ನೀಡಿದ ಸಂವಿಧಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಸಂವಿಧಾನ ದೇಶದ ಪ್ರತಿ ಪ್ರಜೆಗೂ ಸಮಾನ ಹಕ್ಕು ನೀಡಿದೆ ಎಂದು ಶಿಕ್ಷಕ ಶಾಮಸುಂದರ್ ನುಡಿದರು.
ತಾಲ್ಲೂಕಿನ ಯರನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿಯೇ ಸಾಮಾನ್ಯ ವ್ಯಕ್ತಿ ಕೂಡ ಪ್ರಧಾನಿ, ರಾಷ್ಟ್ರಪತಿಯಂಥ ಅತ್ಯುನ್ನತ ಹುದ್ದೆ ಏರಬಹುದಾಗಿದೆ ಎಂದು ತಿಳಿಸಿದರು.
ಸಂವಿಧಾನ ಪವಿತ್ರ ಗ್ರಂಥವಾಗಿದೆ. ದೇಶದ ಜನರಿಗೆ ರಕ್ಷಾ ಕವಚವೂ ಆಗಿದೆ ಎಂದು ಹೇಳಿದರು.
ಮುಖ್ಯಶಿಕ್ಷಕ ಪಾಂಡುರಂಗ ಬೆಲ್ದಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಲೀಂಖಾನ್ ಉಪಸ್ಥಿತರಿದ್ದರು. ಶಿಕ್ಷಕ ರಮೇಶ ನಿರೂಪಿಸಿದರು. ಮಹಮ್ಮದ್ ಯಾಸಿನ್ ಸ್ವಾಗತಿಸಿದರು. ಶಿಕ್ಷಕಿ ರಮಾಬಾಯಿ ವಂದಿಸಿದರು.