ಜಿಲ್ಲೆ

ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಭಾಲ್ಕಿಯಲ್ಲಿ ಡಿ. 2 ರಂದು ನಡೆಯಲಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಭಾರಿ ಯಶಸ್ವಿಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಕೋರಿದ್ದಾರೆ.
ಭೀಮಣ್ಣ ಖಂಡ್ರೆ ಅವರು, ದಲಿತರು, ಶೋಷಿತರು, ಬಡವರು, ಮಹಿಳೆಯರು ಸೇರಿದಂತೆ ಸರ್ವರ ಏಳಿಗೆಗೆ ಶ್ರಮಿಸಿದ್ದಾರೆ. ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಿದ್ದಾರೆ. ರೈತರ ಹಿತ ರಕ್ಷಿಸಿದ್ದಾರೆ. ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಭೀಮಣ್ಣ ಖಂಡ್ರೆ ಅವರಿಗೆ ಶತಮಾನೋತ್ಸವ ಸಮಾರಂಭದ ಮೂಲಕ ಗೌರವ ಸಮರ್ಪಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅವರ ಪುತ್ರ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಸರ್ವ ಸಮುದಾಯದವರೂ ಭಾಗವಹಿಸಬೇಕು ಎಂದು ಹೇಳಿದ್ದಾರೆ.