ಜಿಲ್ಲೆ

ಕಾಂಗ್ರೆಸ್ ಕಚೇರಿಯಲ್ಲಿ ಮಹಾ ಪರಿನಿರ್ವಾಣ ದಿನಾಚರಣೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.
ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಲಾಯಿತು.
ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ, ಪ್ರಮುಖರಾದ ಸತೀಶ್ ವಗ್ಗೆ, ಶಂಕರ ಜ್ಯಾಂತಿ, ಮಾಣಿಕ ಖರ್ಗೆ, ಅರವಿಂದ, ರವಿಕುಮಾರ, ಗೋಪಾಲ್ ದೊಡ್ಡಿ, ಲೋಕೇಶ ಮಂಗಲಗಿ, ವಿಶಾಲ್ ಹೊನ್ನಾ, ಶಾಣಪ್ಪ ನಿಡೋದಿಕರ್ ಮತ್ತಿತರರು ಉಪಸ್ಥಿತರಿದ್ದರು.