ಬೀದರ್: ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಬೀದರ್ ಜಿಲ್ಲೆಗೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಸದಸ್ಯ ಐವನ್ ಡಿಸೋಜಾ ಹೇಳಿದರು.
ಜಿಲ್ಲೆಯ ವಿವಿಧ ಚಚ್೯ಗಳ ರಿಪೇರಿ, ಆವರಣ ದುರಸ್ತಿ, ಸ್ಮಶಾನಭೂಮಿ ಕಾಂಪೌಂಡ್ ನಿರ್ಮಾಣ ಮತ್ತು ಕ್ರಿಶ್ಚಿಯನ್ ಸಮುದಾಯ ಭವನ ನಿರ್ಮಾಣ ಸೇರಿ ನಾನಾ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು, ಉಳಿದ 2ನೇ ಮತ್ತು 3ನೇ ಕಂತಿನ ಬಾಕಿ ಹಣವು ಫೆಬ್ರವರಿ ಒಳಗಡೆ ಬಿಡುಗಡೆ ಮಾಡಲಾಗುವುದು. ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕ್ರಿಶ್ಚಿಯನ್ ಸಮುದಾಯ ಹಿಂದುಳಿದಿದೆ. ತೆಲಂಗಾಣ, ಆಂಧ್ರಪ್ರದೇಶದ ಮಾದರಿಯಲ್ಲಿ ಶೇ.2ರಷ್ಟು ಪ್ರತ್ಯೇಕವಾಗಿ ಮೀಸಲಾತಿ ಕಲ್ಪಿಸಿ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಮಾಜಕ್ಕೆ ಮುಂದೆ ಬರಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ, ಜಾಜ್೯ ಫರ್ನಾಂಡಿಸ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಅವಿನಾಶ್ ಇತರರಿದ್ದರು.