ಜಿಲ್ಲೆ

ತಂತ್ರಜ್ಞಾನದ ಸದುಪಯೋಗ ಪಡೆಯಿರಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಪ್ರತಿಯೊಬ್ಬರೂ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು ಎಂದು ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ.ಉಮಾ ದೇಶಮುಖ ಹೇಳಿದರು.
ಗೋರನಳ್ಳಿ ಬಳಿಯ ಶರಣಬಸವ ಪಬ್ಲಿಕ್ ಸ್ಕೂಲ್ ನಲ್ಲಿ ಬ್ರೇನ್ ರೇನ್ ಎಕ್ಸ್ ಪೋ ಶೀರ್ಷಿಕೆಯಡಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನವು ಮಾನವನ ಜೀವನಕ್ಕೆ ಹಲವು ಅನುಕೂಲಗಳನ್ನು ಮಾಡಿಕೊಟ್ಟಿದೆ. ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಜೀವನದಲ್ಲಿ ಸಾಧನೆ ಮಾಡಬೇಕು. ಸಮಾಜಕ್ಕೆ ಏನಾದರೂ ಕೊಡುಗೆ ಕೊಡಬೇಕು ಎಂದರು.
ಶಾಲೆ ಪ್ರಾಚಾರ್ಯ ಡಾ.ಸತೀಶ್ ಪ್ರತಾಪುರ ಮಾತನಾಡಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಡಾ.ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ, ಚಿ. ದೊಡ್ಡಪ್ಪ ಅಪ್ಪ ಹಾಗೂ ಕಾರ್ಯದರ್ಶಿ ಬಸವರಾಜ ದೇಶಮುಖ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಜ್ಞಾನ ಮಟ್ಟ ಹೆಚ್ಚಿಸಲು ವಸ್ತು ಪ್ರದರ್ಶನ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕೇದಾರ ದೇಶಪಾಂಡೆ, ಸ್ವರ್ಣ ಮಾತನಾಡಿದರು. ಇಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ.ವಿನಿತಾ ಪಾಟೀಲ್ ಇತರರಿದ್ದರು. ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ವಿಜ್ಞಾನ, ಗಣಿತ ಹಾಗೂ ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳು ಪ್ರದರ್ಶನದಲ್ಲಿದ್ದವು. ಚಂದ್ರಯಾನ-3, ಪ್ಲಾಸ್ಟೊಸ್ಕೋಪ್, ಸ್ಮಾಟ್೯ ಬ್ರಿಡ್ಜ್, ಆ್ಯಂಟಿ ಸ್ಲೀಪ್ ಗ್ಯಾಜೇಟ್, ತ್ಯಾಜ್ಯ ಮರುಬಳಕೆ ವಿಧಾನ ಮೊದಲಾದವು ಗಮನ ಸೆಳೆದವು.