ಜಿಲ್ಲೆ

ವದಂತಿಗೆ ಕಿವಿಗೊಡಬೇಡಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಪೆಟ್ರೋಲ್ ಮತ್ತು ಡೀಸೆಲ್ ಎಂದಿನಂತೆ ನಿಯಮಿತವಾಗಿ ಸರಬರಾಜು ಆಗಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಗೋವಿಂದರಡ್ಡಿ ಸ್ಪಷ್ಟಪಡಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಸಿಗುವುದಿಲ್ಲ ಎಂಬ ವದಂತಿಗಳಿಗೆ ಸಾರ್ವಜನಿಕರು ನಂಬಬೇಡಿ ಎಂದು ತಿಳಿಸಿದ್ದಾರೆ. ಪೆಟ್ರೋಲ್ ಟ್ಯಾಂಕ್ ಚಾಲಕರ ಮುಷ್ಕರ ಎಂಬ ವದಂತಿ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಸಂಜೆಯಿಂದ ಪೆಟ್ರೋಲ್ ಬಂಕ್ಗಳಿಗೆ ಜನ ಮುಗಿಬಿದ್ದಿದ್ದಾರೆ.