ಜಿಲ್ಲೆ

ವಿಜಯೇಂದ್ರಗೆ ಭಾಲ್ಕಿ ಶ್ರೀ ಆಶೀರ್ವಾದ

ರೇವಣಸಿದ್ದಪ್ಪ ಪಾಟೀಲ್

ಭಾಲ್ಕಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಅಭಿನಂದಿಸಿದ್ದಾರೆ.
ಬೆಂಗಳೂರಿನಲ್ಲಿ ವಿಜಯೇಂದ್ರ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ ಪೂಜ್ಯರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಜತೆಗೆ ಲಿಂಗಾಯತ ಸಮಾಜದ ನಾಯಕರಾಗಿ ಸಮುದಾಯವನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದ್ದಾರೆ. ತಾವು ಕೂಡ ಉತ್ಸಾಹಿ ಯುವಕರಾಗಿದ್ದು, ತಂದೆ ಮಾರ್ಗದರ್ಶನದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಯಶಸ್ಸು ಕಾಣಿ ಎಂದು ಹಾರೈಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇದ್ದರು.