ಹುಲಸೂರು: ವಾಂಜರಖೇಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 64 ಎಕರೆ ಒತ್ತುವರಿಯಾದ ಭೂಮಿಯನ್ನು ತೆರವುಗೊಳಿಸಲಾಗಿದೆ.
ಸರ್ವೇ ನಂ.153ರಲ್ಲಿ ಕೆಲ ರೈತರು ಹಲವು ವರ್ಷಗಳಿಂದ ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ ಮಾಡುತ್ತಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ. ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಕುಮಾರ ಗಜಾರೆ ಹಾಗೂ ವಲಯ ಅರಣ್ಯಾಧಿಕಾರಿ ಪ್ರವೀಣಕುಮಾರ ಮೋರೆ ನೇತೃತ್ವದಲ್ಲಿ ಇತ್ತೀಚೆಗೆ ಒತ್ತುವರಿ ತೆರವುಗೊಳಿಸಿ ಸ್ವಾಧೀನಕ್ಕೆ ಪಡೆಯಲಾಯಿತು.
ಅರಣ್ಯಾಧಿಕಾರಿಗಳಾದ ಶಿವಾನಂದ ಗೋರನಾಳಕರ್, ಶಿವಾನಂದ ಅಲ್ಮಾಜೆ, ಮೋಹನರಾವ ಕಚೋಟೆ, ವಿಷ್ಣು, ಶಾಲಿವಾನ ಇದ್ದರು.