ಬೀದರ್: ರಾಜ್ಯ ಸರ್ಕಾರವು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಲಿಂಗಾಯತ ಬ್ರಿಗೆಡ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಹೇಳಿದ್ದಾರೆ.
ಬಸವಣ್ಣನವರು ಬಸವಕಲ್ಯಾಣದ ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಸಂಸತ್ತಿನ ಪರಿಕಲ್ಪನೆ ಪರಿಚಯಿಸಿದ್ದರು. ಜಾತಿ, ವರ್ಗ, ವರ್ಣ ರಹಿತ, ಧರ್ಮ ಸಹಿತ ಕಲ್ಯಾಣ ರಾಜ್ಯ ನಿರ್ಮಿಸಿದ್ದರು. ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದರು. ಅವರನ್ನು ಸಾಂಸ್ಕøತಿಕ ನಾಯಕರಾಗಿ ಘೋಷಣೆ ಮಾಡಿರುವುದು ಹರ್ಷ ಉಂಟು ಮಾಡಿದೆ ಎಂದು ಹೇಳಿದ್ದಾರೆ.