ಜಿಲ್ಲೆ

100 ಜನರಿಂದ ರಕ್ತದಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಗಣರಾಜ್ಯೋತ್ಸವ ಹಾಗೂ ಮುಗಳಖೋಡದ ಯಲ್ಲಾಲಿಂಗ ಸ್ವಾಮೀಜಿ ಅವರ 38ನೇ ಪುಣ್ಯಸ್ಮರಣೆ ನಿಮಿತ್ತ ಇಲ್ಲಿಯ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಬಿರದಲ್ಲಿ 100 ಜನ ರಕ್ತದಾನ ಮಾಡಿದರು.
ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸ್ವಾಮೀಜಿ ಅವರ ಅನುಯಾಯಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ರಕ್ತದ ತುರ್ತು ಅವಶ್ಯಕತೆ ಇರುವವರಿಗೆ ನೆರವಾಗಲು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಹೇಳಿದರು.
ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ. ಹೀಗಾಗಿ ರಕ್ತದಾನಕ್ಕೆ ಮುಂದೆ ಬರಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಒಂದು ವರ್ಷದ ವೈದ್ಯಕೀಯ ಸೇವೆ ಒದಗಿಸುವ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ‘ಸಿದ್ಧಶ್ರೀ ಆರೋಗ್ಯ ಕಾರ್ಡ್’ಗಳನ್ನು ಬಿಡುಗಡೆಗೊಳಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ಡಾ. ರೂಪೇಶ ಎಕಲಾರಕರ್, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.