ಬೀದರ್: ರಾಜ್ಯ ವಿಧಾನ ಪರಿಷತ್ ನಾಮ ನಿರ್ದೇಶನದಲ್ಲಿ ಮಾದಿಗ ಸಮುದಾಯಕ್ಕೆ ಪ್ರಾನಿಧ್ಯ ಕಲ್ಪಿಸಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ರೋಹಿದಾಸ ಘೋಡೆ ಒತ್ತಾಯಿಸಿದ್ದಾರೆ
ಈ ಕುರಿತು ಅವರು ಕಲಬುರಗಿಯಲ್ಲಿ ಈಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಾದಿಗ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದೆ. ಆದರೆ, ಕಲ್ಯಾಣ ಕರ್ನಾಟಕದಲ್ಲಿ ಸಮುದಾಯದ ಯಾರಿಗೂ ಈವರೆಗೆ ರಾಜಕೀಯ ಪ್ರಾತಿನಿಧ್ಯ ಒದಗಿಸಿಲ್ಲ ಎಂದು ಗಮನ ಸೆಳೆದರು.
34 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ, ಕೆಪಿಸಿಸಿ ಕಾರ್ಯದರ್ಶಿ, ಬೀದರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಸದಸ್ಯ ಸೇರಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ತಮ್ಮ ಪಕ್ಷ ನಿಷ್ಠೆ ಗುರುತಿಸಿ ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಬೇಕು ಎಂದು ಬೇಡಿಕೆ ಮಂಡಿಸಿದರು.