ಜಿಲ್ಲೆ

ಮಹಾರಾಷ್ಟ್ರ ಸಂಯೋಜಕರಾಗಿ ಪ್ರಕಾಶ ಘಾಳೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಭಾರತ್ ಜೋಡೋ ನ್ಯಾಯ ಯಾತ್ರೆಯ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‍ನ ಮಹಾರಾಷ್ಟ್ರ ಸಂಯೋಜಕರಾಗಿ ಜಿಲ್ಲೆಯ ಹಿರಿಯ ಮುಖಂಡ ಪ್ರಕಾಶ ಘಾಳೆ ಅವರನ್ನು ನೇಮಕ ಮಾಡಲಾಗಿದೆ.
ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುಖ್ಪಾಲ್‍ಸಿಂಗ್ ಖೈರಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಯಾತ್ರೆಯ ಯಶಸ್ವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ.
ಪ್ರಕಾಶ ಘಾಳೆ ಸದ್ಯ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‍ನ ಮಹಾರಾಷ್ಟ್ರ ಉಸ್ತುವಾರಿಯಾಗಿದ್ದಾರೆ. ಕಿಸಾನ್ ಕಾಂಗ್ರೆಸ್ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ಸಂಯೋಜಕ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದಾರೆ. ಅನುಭವ ಹಾಗೂ ಸಂಘಟನಾ ಚಾತುರ್ಯದ ಹಿನ್ನೆಲೆಯಲ್ಲಿ ಅವರಿಗೆ ಭಾರತ್ ಜೋಡೋ ನ್ಯಾಯ ಯಾತ್ರೆಯ ಮಹಾರಾಷ್ಟ್ರದ ಹೊಣೆ ಕೊಡಲಾಗಿದೆ.