ಜಿಲ್ಲೆ

ಭೀಕರ ಅಪಘಾತ ನಾಲ್ವರು ಸಾವು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಭಾಲ್ಕಿ ತಾಲೂಕಿನ ಸೇವಾ ನಗರ ತಾಂಡಾ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.
ಮಹಾರಾಷ್ಟ್ರದ ಉದಗೀರ್ ಮೂಲದ ದಸ್ತಗಿರ್ ದಾವಲಸಾಬ್ (36), ರಸೀದಾ ಶೇಖ್ (36), ಅಮಾಮ್ಶೇಖ್ (51) ಹಾಗೂ ಚಾಲಕ ವಲಿ (31) ಮೃತಪಟ್ಟಿದ್ದಾರೆ. ಉದಗೀರ್ ನಿಂದ ಹೈದರಾಬಾದ್ ಗೆ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ಪಿಕ್ ಅಪ್ ಹಾಗೂ ಬೀದರ್ ನಿಂದ ಭಾಲ್ಕಿಗೆ ಕಡೆಗೆ ಹೋಗುತ್ತಿದ್ದ ಸಕ್ಕರೆ ಕಾರ್ಖಾನೆಯ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಾಯಗೊಂಡ ಎಂಟು ಜನರನ್ನು ಬ್ರಿಮ್ಸ್ ನಲ್ಲಿ ದಾಖಲಿಸಲಾಗಿದೆ.
ಪಿಕ್ಅಪ್ ವಾಹನದಲ್ಲಿ 6 ಜನ ಪುರುಷರು, ಐವರು ಮಹಿಳೆಯರು, ಮೂವರು ಮಕ್ಕಳು ಸೇರಿ 14 ಜನ ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದರು. ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಚನ್ನಬಸವಣ್ಣ ಲಂಗೋಟಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.