ಭಾಲ್ಕಿ: ಬೀದರ್ ತಾಲೂಕಿನ ಚಿಮಕೋಡ ಗ್ರಾಮದ ಜೆಡಿಎಸ್ ಹಿರಿಯ ಮುಖಂಡ ಸೋಮನಾಥ ಕಂದಗುಳೆ ಕಾಂಗ್ರೆಸ್ ಸೇರಿದ್ದಾರೆ.
ಪಟ್ಟಣದಲ್ಲಿ ಭಾನುವಾರ ಕಂದಗುಳೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿ ಮಾತನಾಡಿ, ಕಾಂಗ್ರೆಸ್ ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ. ರಾಜ್ಯ ಮತ್ತು ದೇಶದ ಸವಾರ್ಂಗೀಣ ಪ್ರಗತಿ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಎಲ್ಲ ವರ್ಗದವರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿರುವ ಕಾರಣ ಬಿಜೆಪಿ, ಜೆಡಿಎಸ್ ತೊರೆದು ಹಲವರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಕಂದಗುಳೆ ಸೇರ್ಪಡೆಯಿಂದ ಆ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು.
ಮುಖಂಡರಾದ ಅಮೃತರಾವ ಚಿಮಕೋಡೆ, ಗೋವರ್ಧನ ರಾಠೋಡ್ ಇತರರಿದ್ದರು.